ADVERTISEMENT

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 14:20 IST
Last Updated 7 ಜನವರಿ 2024, 14:20 IST
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಅಗ್ರಹಿಸಿ ಭಾನುವಾರ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳು ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿದರು
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಅಗ್ರಹಿಸಿ ಭಾನುವಾರ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳು ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿದರು   

ವಿಜಯಪುರ: ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ತಾರತಮ್ಯ ಎಸಗಲಾಗುತ್ತಿದ್ದು, ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಿ ಭಾನುವಾರ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿದರು. 

ಉತ್ತರ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಗೋಲಶೇಟ್ಟಿ ಮಾತನಾಡಿ, ಉತ್ತರ ಕರ್ನಾಟಕವೂ ಕೃಷಿ, ಶಿಕ್ಷಣ, ಸಾರಿಗೆ, ರೈಲು, ಆರೋಗ್ಯ, ಆಡಳಿತ, ರಾಜಕೀಯ, ಅಧ್ಯಾತ್ಮ, ಮಾಧ್ಯಮ, ಉದ್ಯಮ, ಚಲನಚಿತ್ರ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಾರತಮ್ಯವಾಗುತ್ತಿದೆ ಎಂದರು.

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಈಗಾಗಲೇ ಹೋರಾಟ ಸಮಿತಿಯು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ, ಇನ್ನೂ ರಾಷ್ಟ್ರಪತಿಗಳಿಗೆ ಹಾಗೂ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ADVERTISEMENT

ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಕಾಮಣ್ಣ ಗಂಗನಹಳ್ಳಿ, ಬಸವರಾಜ ಕಂಕನವಾಡಿ, ದೇವಕಾಂತ್ ಬಿಜ್ಜರಗಿ, ದಾನೇಶ ಅವಟಿ, ಸೋಮು ಜಗದಾಳ್, ಗುರುಪಾದ ಕಲಾದಗಿ, ಬಾಬು ಚನ್ನಪ್ಪಗೌಡ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.