ADVERTISEMENT

ಪೊಲೀಸರಿಂದ ಲಂಚಕ್ಕೆ ಬೇಡಿಕೆ: ಪೆಟ್ರೋಲಿಂಗ್ ವಾಹನಕ್ಕೆ ಅಡ್ಡಮಲಗಿದ ಲಾರಿ ಚಾಲಕ

​ಪ್ರಜಾವಾಣಿ ವಾರ್ತೆ
Published 22 ಮೇ 2021, 6:04 IST
Last Updated 22 ಮೇ 2021, 6:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ವಿಜಯಪುರ: ಇಲ್ಲಿನ ವಿಜಯಪುರ–ಅಥಣಿ ಹೆದ್ದಾರಿಯಲ್ಲಿ ಸಂಚರಿಸುವ ಲಾರಿಗಳನ್ನು ವಿನಾಕಾರಣ ತಡೆದು ನಿಲ್ಲಿಸಿ, ಲಂಚಕ್ಕೆ ಬೇಡಿಕೆ ಇಟ್ಟ ಹೈವೇ ಪೆಟ್ರೋಲಿಂಗ್‌ ಪೊಲೀಸ್ ವಾಹನದ ಎದುರು ಅನ್ಯ ರಾಜ್ಯದ ಲಾರಿ ಚಾಲಕರೊಬ್ಬರು ಅಡ್ಡಲಾಗಿ ಮಲಗಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಲಾರಿ ಚಾಲಕ ಅಡ್ಡಲಾಗಿ ಮಲಗಿ ಪ್ರತಿರೋಧ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರವೇ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್ ಇಬ್ಬರು ಪೊಲೀಸರನ್ನು ಅಮಾನತು ಮಾಡಿದ್ದಾರೆ.

ADVERTISEMENT

ತಿಕೋಟಾ ಪೊಲೀಸ್‌ ಠಾಣೆಯ ಎಎಸ್‌ಐ ಎಂ.ಎಸ್‌.ವಾಲಿಕಾರ ಹಾಗೂ ವಿಜಯಪುರ ಡಿಎಆರ್‌ ಘಟಕದ ಎ.ಎಸ್‌.ಐ ಯು.ಬಿ.ಚಿಗರೊಳ್ಳಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಲಾರಿ ಚಾಲಕರಿಂದ ಹಣ ವಸೂಲಿ ಮಾಡುವ ವಿಡಿಯೊ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಪರಿಶೀಲಿಸಿ, ಇಲಾಖಾ ವಿಚಾರಣೆಯನ್ನು ಬಾಕಿ ಇಟ್ಟು ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.