ADVERTISEMENT

ಬಾಲಕಿಯರ ಕೊಲೆ: ಸಿಒಡಿ ತನಿಖೆಗೆ ಆಗ್ರಹ

ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು

​ಪ್ರಜಾವಾಣಿ ವಾರ್ತೆ
Published 29 ಮೇ 2021, 14:04 IST
Last Updated 29 ಮೇ 2021, 14:04 IST
ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಇತ್ತೀಚೆಗೆ ಇಬ್ಬರು ಬಾಲಕಿಯರನ್ನು ಅತ್ಯಾಚಾರಗೈದು ಕೊಲೆ ಮಾಡಿ ಬಾವಿಗೆ ಎಸೆದಿರುವ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಸದಸ್ಯರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಜಯಶ್ರೀ ಮತ್ತು ಅಶೋಕ ಜಿ.ಯರಗಟ್ಟಿ ಅವರಿಗೆ ಮನವಿ ಸಲ್ಲಿಸಿದರು
ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಇತ್ತೀಚೆಗೆ ಇಬ್ಬರು ಬಾಲಕಿಯರನ್ನು ಅತ್ಯಾಚಾರಗೈದು ಕೊಲೆ ಮಾಡಿ ಬಾವಿಗೆ ಎಸೆದಿರುವ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಸದಸ್ಯರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಜಯಶ್ರೀ ಮತ್ತು ಅಶೋಕ ಜಿ.ಯರಗಟ್ಟಿ ಅವರಿಗೆ ಮನವಿ ಸಲ್ಲಿಸಿದರು   

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಇತ್ತೀಚೆಗೆ ಇಬ್ಬರು ಬಾಲಕಿಯರನ್ನು ಅತ್ಯಾಚಾರಗೈದು ಕೊಲೆ ಮಾಡಿ ಬಾವಿಗೆ ಎಸೆದಿರುವ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಆಗ್ರಹಿಸಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಜಯಶ್ರೀ ಮತ್ತು ಅಶೋಕ ಜಿ.ಯರಗಟ್ಟಿ ಅವರು ಶನಿವಾರ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಸದಸ್ಯರು ಈ ಸಂಬಂಧ ಮನವಿ ಸಲ್ಲಿಸಿದರು.

ಬಾಲಕಿಯರನ್ನು ಅತ್ಯಾಚಾರ, ಕೊಲೆ ಮಾಡಿರುವ ಮೂವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ. ಆದರೆ, ಈ ನಡುವೆ ಬಾಲಕಿಯರ ಮರಣೋತ್ತರ ಪರೀಕ್ಷಾ ವರದಿಯಲ್ಲಿ, ಇದು ಅತ್ಯಾಚಾರ, ಕೊಲೆಯಲ್ಲ, ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪಿಸಿದರು.

ADVERTISEMENT

ಬಾಲಕಿಯರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸಬೇಕು ಹಾಗೂ ಮರು ತನಿಖೆ ನಡೆಸಬೇಕು. ಇಲ್ಲವಾದರೆ ಬಾಗೇವಾಡಿಯಿಂದ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಮೂಲಕ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ)ದ ಜಿಲ್ಲಾ ಮುಖಂಡರಾದ ಗುರುರಾಜ ಗುಡಿಮನಿ, ಉಮೇಶ ನಡುವಿನಮನಿ, ಕಾಮೇಶ ಭಜಂತ್ರಿ, ಶಂಕ್ರಪ್ಪ ಮಾದರ, ಮಡಿವಾಳಪ್ಪ ಕಳ್ಳಿಮನಿ, ಬಸವರಾಜ, ಮಾನಪ್ಪ ಕಳ್ಳಿಮನಿ, ಮಾದೇವಪ್ಪ ನಾಗರಾಳ, ಸುನೀಲ ನಡುವಿನಮನಿ, ಸಾಬು ತಳಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.