ವಿಜಯಪುರ: ಖಾಲಿಯಿರುವ ಸರ್ಕಾರಿ ಉದ್ಯೋಗಕ್ಕೆ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ನಗರದಲ್ಲಿ ಮಂಗಳವಾರ ಯುವಜನನಾಕ್ರೋಶ ಹೋರಾಟ ನಡೆಯಿತು.
ನಗರದ ಗಾಂಧಿ ಚೌಕಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ನಡೆದ ರ‍್ಯಾಲಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು, ಉದ್ಯೋಗ ನೇಮಕಾತಿಗೆ ಆಗ್ರಹಿಸಿದರು.
ಡಿವಿಪಿ ರಾಜ್ಯ ಘಟಕದ ಅಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ನಾಡಿನಾದ್ಯಂತ ವಿದ್ಯಾರ್ಥಿ ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ಹಿಂದಿನ ಬಿಜೆಪಿ, ಈಗಿನ ಕಾಂಗ್ರೆಸ್ ಸರ್ಕಾರ ಸೇರಿದಂತೆ ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆಗಳನ್ನು ತುಂಬದೇ ಸತಾಯಿಸುತ್ತಿರುವುದು ಖಂಡನೀಯ ಎಂದರು.
ವಿದ್ಯಾರ್ಥಿ, ಯುವ ಜನರು ನೌಕರಿ ಪಡೆಯಬೇಕೆನ್ನುವ ಉದ್ದೇಶದಿಂದ ಹಗಲು ರಾತ್ರಿ ಕಷ್ಟಪಟ್ಟು ಶ್ರಮಪಡುತ್ತಿದ್ದಾರೆ. ಆದರೆ, ಸರ್ಕಾರ ಅವರ ಕಷ್ಟಕ್ಕೆ ಪ್ರತಿಫಲವಾಗಿ ಉದ್ಯೋಗ ನೀಡದೆ ಅವರ ಜೀವನವನ್ನು ಹಾಳು ಮಾಡುತ್ತಿರುವುದು ಖಂಡನೀಯ ಎಂದರು.
ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಲಕ್ಷ್ಮಣ ನಿಂಬರಗಿ ಮನವಿ ಸ್ವೀಕರಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ತಿನ ಮುಖಂಡರಾದ ಹುಚ್ಚಪ್ಪ ಸಿಂದಗಿ, ಮಂಜುನಾಥ, ಉಪಾಧ್ಯಕ್ಷ ಮಾದೇಶ ಚಲವಾದಿ, ಪ್ರತಾಪ ತೋಳನೂರ, ಪ್ರಶಾಂತ ದಾಂಡೇಕರ, ರಾಹುಲ ಕಳಸದ, ಯಮನೂರಿ ಮಾದರ, ಭೀಮು, ಮಂಜುನಾಥ ಎಲ್., ಶಿಲ್ಪಾ ಮುಂತಾದವರು ಭಾಗವಹಿಸಿದ್ದರು.
ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಒಂದು ವಾರದಲ್ಲಿ ನೋಟಿಫಿಕೇಶನ್ ಮಾಡಬೇಕುಶ್ರೀನಾಥ ಪೂಜಾರಿಅಧ್ಯಕ್ಷ ಡಿವಿಪಿ ರಾಜ್ಯ ಘಟಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.