ADVERTISEMENT

ಜೈನಮುನಿ ಹತ್ಯೆ; ಆರೋಪಿಗಳಿಗೆ ಶಿಕ್ಷೆಗೆ ಆಗ್ರಹ 

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 14:33 IST
Last Updated 12 ಜುಲೈ 2023, 14:33 IST

ವಿಜಯಪುರ: ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿಯನ್ನು ಕ್ರೂರವಾಗಿ ಹತ್ಯೆಗೈದ ಕಟುಕರನ್ನು 3 ತಿಂಗಳ ಒಳಗಡೆ ಬಹಿರಂಗ ಗಲ್ಲುಶಿಕ್ಷೆಗೆ ಗುರಿಪಡಿಸುವಂತೆ ಅಲ್-ಹಜ್ ಅಭ್ಯಾಸಲಿ ಎಲ್. ಚೌಧರಿ ಆಗ್ರಹಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಅಮಾನುಷವಾಗಿ ಕೊಲೆ ಮಾಡಿದ್ದು ದುಖಃದ ಸಂಗತಿ. ಇದು ನಾಡಿನ ಸರ್ವ ಜನತೆಗೆ ದಿಗ್ಧಮೆ ಉಂಟು ಮಾಡಿದೆ. ಆದ್ದರಿಂದ ಮುಖ್ಯಮಂತ್ರಿಗಳು ಹೆಚ್ಚಿಗೆ ಸಮಯ ತೆಗೆದುಕೊಳ್ಳದೇ 3 ತಿಂಗಳ ಒಳಗಡೆ ಫಾಸ್ಟ್ ಟ್ರ್ಯಾಕ್ ಕೋರ್ಟಿನಿಂದ ಕೊಲೆಗಡಕರಿಗೆ ಮರಣ ದಂಡನೆಯಾಗಬೇಕು.

ಜೈನಮುನಿ ಕಾಮಕುಮಾರ ನಂದಿ ಮಹಾರಾಜನ್ನು ಕೊಲೆ ಮಾಡಿದ ಕಟುಕರಿಗೆ ಕೇವಲ 6 ಗಂಟೆಯಲ್ಲಿ ಹೆಡೆಮೂರಿ ಕಟ್ಟಿದ್ದು, ರಾಜ್ಯದ ಸಮರ್ಥ ಪೊಲೀಸರಿಗೆ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಕೃತ್ಯದಲ್ಲಿ ಭಾಗಿಯಾದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.