ADVERTISEMENT

ವಿಜಯಪುರ: ತಾಂಡಾಗಳನ್ನು ಕಂದಾಯ ಗ್ರಾಮವಾಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 15:05 IST
Last Updated 29 ಸೆಪ್ಟೆಂಬರ್ 2020, 15:05 IST
ವಿಜಯಪುರ ಜಿಲ್ಲೆಯ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡುವಂತೆ ಆಗ್ರಹಿಸಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು
ವಿಜಯಪುರ ಜಿಲ್ಲೆಯ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡುವಂತೆ ಆಗ್ರಹಿಸಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು   

ವಿಜಯಪುರ: ಜಿಲ್ಲೆಯ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡುವಂತೆ ಆಗ್ರಹಿಸಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಾಂಡಾ ಅಭಿವೃದ್ಧಿ ನಿಗಮದ ಇಂಡಿ ತಾಲ್ಲೂಕಿನ ಸಂಪನ್ಮೂಲ ವ್ಯಕ್ತಿ ಸುನೀಲ ಭೀಮರಾಯ ರಾಠೋಡ ಮಾತನಾಡಿ, ಸರ್ಕಾರವು ರಾಜ್ಯದ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡುವಂತೆ ಆದೇಶ ಮಾಡಿದೆ. ಆದರೆ, ಇದುವರೆಗೂ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡಿರುವುದಿಲ್ಲ ಎಂದು ಆರೋಪಿಸಿದರು.

ರಾಜ್ಯದ ಎಲ್ಲ ತಾಂಡಾಗಳುರಸ್ತೆ, ಬೀದಿದೀಪ, ಚರಂಡಿ, ಕುಡಿಯುವ ನೀರಿಲ್ಲದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ, ಅಭಿವೃದ್ಧಿ ಮರೀಚಿಕೆಯಾಗಿದೆ ಎಂದರು.

ADVERTISEMENT

ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡಿದಾಗ ತಾಂಡಾದ ಅಭಿವೃದ್ಧಿಯೊಂದಿಗೆ ಮೂಲ ಸೌಲಭ್ಯಗಳನ್ನು ಪಡೆಯುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.

ನಿಗಮದವಿಜಯಪುರ ವಲಯದ ಪ್ರಥಮ ದರ್ಜೆ ಸಹಾಯಕ ವಸಂತ ರಾಠೋಡ, ಸಂಪನ್ಮೂಲ ವ್ಯಕ್ತಿಗಳಾದ ಸುನೀಲ ರಾಠೋಡ, ರವಿ ಸೇವು ಲಮಾಣಿ, ಸುನೀಲ ಆರ್. ಜಾಧವ್‌, ಗಿರಿಧರ ಪವಾರ, ಲಕ್ಷ್ಮಣ ರಾಠೋಡ, ವಿನೋದ ಚವ್ಹಾಣ, ವಿಕಾಸ ಲಮಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.