ADVERTISEMENT

ಅಕ್ರಮ ಮರಳುಗಾರಿಕೆ ತಡೆಗಟ್ಟಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಮೇ 2023, 15:55 IST
Last Updated 24 ಮೇ 2023, 15:55 IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಯಡಹಳ್ಳಿ ಅವರ ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು 
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಯಡಹಳ್ಳಿ ಅವರ ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು    

ವಿಜಯಪುರ: ದೇವರಹಿಪ್ಪರಗಿ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ತಡೆಗಟ್ಟುವಂತೆ  ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಯಡಹಳ್ಳಿ ಅವರ ನೇತೃತ್ವದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಎರಡು ತಿಂಗಳ ಹಿಂದೆ ಅಕ್ರಮ ಮರಳುಗಾರಿಕೆ ತಡೆಯುವಂತೆ ದೇವರಹಿಪ್ಪರಗಿ ತಹಶೀಲ್ದಾರ್‌ ಕಚೇರಿ ಸೇರಿದಂತೆ ದೇವರಹಿಪ್ಪರಗಿ ಮತ್ತು ಕಲಕೇರಿ ಪೊಲೀಸ್ ಠಾಣೆಗಳಿಗೆ ದೂರನ್ನು ಸಲ್ಲಿಸಲಾಗಿತ್ತು. ಆದರೂ ಕ್ರಮಕೈಗೊಂಡಿಲ್ಲ ಎಂದು ಹೇಳಿದರು.

ಅಕ್ರಮ ಮರಳುಗಾರಿಕೆ ತಡೆಯಲು ಅಧಿಕಾರಿಗಳು ವಿಫಲರಾದರೆ ಬೆಂಗಳೂರಿನ ವಿಧಾನಸೌಧದ ಮುಂದೆ ಅರೆಬೆತ್ತಲೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ADVERTISEMENT

ನಗರ ಘಟಕದ ಅಧ್ಯಕ್ಷ ಅಮಿದ್ ಇನಾಮ್ದಾರ್‌, ರಾಕೇಶ ಇಂಗಳಗಿ, ಪ್ರಕಾಶ ಪಾಟೀಲ, ಪ್ರವೀಣ ಕನಸೆ, ರಾಘವೇಂದ್ರ ಚಲವಾದಿ, ಮೈಬೂಬ್ ತಾಂಬೋಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.