ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಜನವರಿ 27ರಂದು ನಡೆದ ಚುನಾವಣೆ ಗೊಂದಲ ಕುರಿತು ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ಸೋಮವಾರ ನಡೆಸಿದ ಹೈಕೋರ್ಟ್ ಕಲಬುರ್ಗಿ ವಿಭಾಗೀಯ ಪೀಠ, ಅಪೂರ್ಣವಾಗಿರುವ ಉಪ ಮೇಯರ್ ಚುನಾವಣಾ ಪ್ರಕ್ರಿಯೆಯನ್ನು ಫೆ.12ರಂದು ನಡೆಸಲು ಮಧ್ಯಂತರ ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.19ರಂದು ತಾನು ನೀಡುವ ಅಂತಿಮ ತೀರ್ಪಿನ ಬಳಿಕ ಮೇಯರ್, ಉಪ ಮೇಯರ್ ಚುನಾವಣೆ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಆದೇಶದಲ್ಲಿ ಸೂಚಿಸಿದೆ.
ಆಸ್ತಿ ವಿವರ ಸಲ್ಲಿಸಿದ ಮಹಾನಗರ ಪಾಲಿಕೆ ಎಲ್ಲ ಸದಸ್ಯರ ಸದಸ್ಯತ್ವ ರದ್ದುಗೊಳಿಸುವಂತೆ ಸಲ್ಲಿಕೆಯಾಗಿರುವ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಷಯದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ, ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.