ADVERTISEMENT

ಪ್ರೊ. ಪೋತೆಗೆ ‘ದೇಸಿ ಸನ್ಮಾನ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 23:32 IST
Last Updated 25 ಸೆಪ್ಟೆಂಬರ್ 2025, 23:32 IST
ಪ್ರೊ.ಎಚ್.ಟಿ.ಪೋತೆ
ಪ್ರೊ.ಎಚ್.ಟಿ.ಪೋತೆ   

ಸಿಂದಗಿ (ವಿಜಯಪುರ): ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನವು ಜಾನಪದ ವಿದ್ವಾಂಸರಿಗೆ ನೀಡುವ ರಾಜ್ಯಮಟ್ಟದ ‘ದೇಸಿ ಸನ್ಮಾನ’ ಪ್ರಶಸ್ತಿ ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 11 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಜೊತೆಗೆ ಪ್ರಶಸ್ತಿ ಪುರಸ್ಕೃತರ ಸಾಹಿತ್ಯ ಸಾಧನೆ ಕುರಿತು ಕಿರು ಗ್ರಂಥ ಪ್ರಕಟಿಸಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT