
ದೇವರಹಿಪ್ಪರಗಿ: ವಿದ್ಯಾರ್ಥಿನೀಯರು ಸೇರಿದಂತೆ ಮಹಿಳೆಯರು ಯಾವುದೇ ರೀತಿಯ ಲೈಂಗಿಕ ಕಿರುಕುಳಕ್ಕೆ ಒಳಗಾದಾಗ ಕಾನೂನಿನ ಅಡಿ ನ್ಯಾಯ ಪಡೆಯಬಹುದಾಗಿದೆ ಎಂದು ವಕೀಲ ವಿ.ಜಿ. ಚಾವರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಘಟಕ, ಸಿಂದಗಿ ಇವರುಗಳ ಸಹಭಾಗಿತ್ವದಲ್ಲಿ ಶುಕ್ರವಾರ ಜರುಗಿದ ‘ಮಹಿಳಾ ಲೈಂಗಿಕಾ ಕಿರುಕುಳ ವಿರೋಧಿ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆಯರ ಮೇಲೆ ಆಗುವಂತಹ ಲೈಂಗಿಕ ದೌರ್ಜನ್ಯ ಮತ್ತು ಅದರ ವಿರುದ್ಧ ಇರುವಂತಹ ಕಾನೂನಿನ ಅರಿವು ನೀಡಿದರು.
ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-ಡಿಡಿಒ ಕಚೇರಿಯ ಯಶೋದಾ, ವಿಜಯಪುರ ಉಜ್ವಲ ಗ್ರಾಮೀಣಾಭಿವೃದ್ಧಿ ಸೇವಾಸಂಸ್ಥೆಯ ನಿರ್ದೇಶಕಿ, ಸುನಂದಾ ತೋಳಬಂದಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.
ಸಿಂದಗಿ ತಾಲ್ಲೂಕು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪುಷ್ಪಾವತಿ ಬಿರಾದಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ ಕುಂಬಾರ, ಹನುಮಗೌಡ ಪಾಟೀಲ,
ಕಾಲೇಜು ಆಂತರಿಕ ದೂರು ಸಮಿತಿ ಸಂಚಾಲಕಿ ಪ್ರೇಮಕುಮಾರಿ ಪಿ. ಸಮಿತಿಯ ಸದಸ್ಯೆ ಶಾರದ ಸೋಮಪುರ, ರಾಜೇಶ್ವರಿ, ಪೂಜಾ ಕುಳಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.