
ಹೊರ್ತಿ: ‘ಗ್ರಾಮಾಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಸರ್ವ ಸದಸ್ಯರ ಪರಸ್ಪರ ಸಹಕಾರ ಶ್ಲಾಘನೀಯ' ಎಂದು ಹೊರ್ತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ ಟಿ. ನಾಯಕ ಹೇಳಿದರು.
ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಎಲ್ಲ ಸದಸ್ಯರಿಗೆ ಸನ್ಮಾನಿಸಿ, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲೇಸಿ ಭೋಸಗಿ ಮಾತನಾಡಿ, ‘ಗ್ರಾಮದ ಅಭಿವೃದ್ಧಿಯಲ್ಲಿ ಸರ್ವ ಸದಸ್ಯರ ಸಹಕಾರ, ಒಗ್ಗಟ್ಟಿನ ಮನೋಭಾವ ಮುಖ್ಯ. ಇದರಿಂದ ಗ್ರಾಮ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ. ಎಲ್ಲರ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇವೆ’ ಎಂದು ಹೇಳಿದರು.
ಕಾರ್ಯಕ್ರಮದ ಮುನ್ನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಪಿಡಿಒ ಮಹೇಶ ನಾಯಕ ಸನ್ಮಾನಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಶ್ರೀ ಭೋಸಗಿ, ಉಪಾಧ್ಯಕ್ಷ ರಾಜು ವಡ್ಡರ, ಕಾರ್ಯದರ್ಶಿ ಯಲ್ಲಪ್ಪ ಗಾ ಡಿವಡ್ಡರ, ಮಹಾದೇವ ರಾಠೋಡ, ಶ್ರೀಶೈಲ ಭೋಸಗಿ, ಸುರೇಶ ಅಳ್ಳಿಮೋರೆ, ಪವನ ಕುಲಕರ್ಣಿ, ವಿಠಲ ಬಬಲಾದ, ಮೈಬುಬ ಇಂಡಿ ಮತ್ತು ಗ್ರಾಮಸ್ಥರು ಇದ್ದರು.
ಪವನ ಕುಲಕರ್ಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ ಅಳ್ಳಿಮೋರೆ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.