ADVERTISEMENT

ಆತ್ಮವಿಶ್ವಾಸ, ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡಿ: ರಿಷಿ ಆನಂದ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 4:58 IST
Last Updated 4 ಡಿಸೆಂಬರ್ 2025, 4:58 IST
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು   

ವಿಜಯಪುರ: ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಿ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ವಿವಿಧ ಆಟೋಟಗಳ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆಯಬೇಕು.

ಕ್ರೀಡೆಗಳು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ವಿಶೇಷ ಚೇತನರು ಕಿಳರಿಮೆಯನ್ನು ತೊಡೆದು ಹಾಕಬೇಕು. ವಿಶೇಷಚೇತನರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಬದುಕು ನಿರ್ವಹಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ವಿಶೇಷ ಚೇತನರು ಯಾವುದೇ ಕಷ್ಟಕರ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಧೃತಿಗೆಡದೆ ಧೈರ್ಯದಿಂದ ಮುನ್ನಡೆಯಬೇಕು. ತಮ್ಮ ಯಾವುದೇ ಸಮಸ್ಯೆಗಳಿದಲ್ಲಿ, ತಮ್ಮನ್ನು ಹಾಗೂ ಸಂಬAಧಿಸಿದ ಇಲಾಖೆಯನ್ನು ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಜಾವೆದ್ ಜಮಾದಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಕೆಂಪಣ್ಣವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಅಡಿವೆಪ್ಪ ಸಾಲಗಲ, ಸಂಜೀವ ಖೋತ್, ಸುಮಿತ ಪಾಂಡಿಚೇರಿ, ವಿನೋದ ಖೇಡ, ನಿಮಿಷಾಚಾರ್ಯ, ಮಹೇಶ ಮುಧೋಳ ಮತ್ತಿತರರು ಉಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.