ಬಸವನಬಾಗೇವಾಡಿ: ‘ಗ್ರಾಮೀಣ ಅಭಿವೃದ್ಧಿ ಹಾಗೂ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ’ ಎಂದು ಟ್ರಸ್ಟ್‌ನ ತಾಲ್ಲೂಕು ಯೋಜನಾಧಿಕಾರಿ ಪ್ರಸನ್ನ ಹೇಳಿದರು.
ತಾಲ್ಲೂಕಿನ ಹಂಗರಗಿ ಗ್ರಾಮದಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಅಂಗವಿಕಲ ಫಲಾನುಭವಿಗಳಿಗೆ ವೀಲ್ ಚೇರ್ ವಿತರಿಸಿ ಮಾತನಾಡಿದರು.
‘ಸಂಸ್ಥೆಯು ವಿವಿಧ ಕ್ಷೇತ್ರದಲ್ಲಿ ಹಲವಾರು ಕಾರ್ಯಗಳನ್ನು ಮಾಡುವ ಮೂಲಕ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ’ ಎಂದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಿವೇದಿತಾ ಪತ್ತಾರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯೆ ಸಾವಿತ್ರಿ ಕಲ್ಯಾಣಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ತಾಲ್ಲೂಕು ಸಮನ್ವಯ ಅಧಿಕಾರಿ ಸಂಗೀತಾ ಮಡಿವಾಳರ, ವಲಯ ಮೇಲ್ವಿಚಾರಕಿ ಅಂಬಿಕಾ ಪಾಟೀಲ, ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ, ಪಿಕೆಪಿಎಸ್ ಸದಸ್ಯ ರಾಮನಗೌಡ ಬಿರಾದಾರ, ಗ್ರಾಮ ಪಂಚಾಯಿತಿ ಸದಸ್ಯ ಗೂಳಪ್ಪ ಜನ್ನಾ, ವಿವೇಕಾನಂದ ಕಲ್ಯಾಣಶೆಟ್ಟಿ, ಸಿದ್ದು ಮುಕಾರ್ತಿಹಾಳ, ಗಂಗವ್ವ ಕೋಲಕಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.