ADVERTISEMENT

ಡಿಕೆಶಿ ವಿರುದ್ಧದ ಅರ್ಜಿ ತಿರಸ್ಕಾರ| ಸುಪ್ರೀಂ ಕೋರ್ಟ್‌ ಮೊರೆ: ಯತ್ನಾಳ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 13:08 IST
Last Updated 29 ಆಗಸ್ಟ್ 2024, 13:08 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸಾಂವಿಧಾನಿಕ ಪ್ರಶ್ನೆಗಳು ಉದ್ಭವಿಸುವ ಕಾರಣ ಹೈಕೋರ್ಟ್‌ ತಿರಸ್ಕರಿಸಿದ್ದು, ಇದನ್ನು ನಾನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡ ಅವರು, ‘ಕರ್ನಾಟಕ ಹೈಕೋರ್ಟ್‌ನಲ್ಲಿ ನಾನು ಹಾಕಿದ್ದ ದಾವೆಗೆ ಸಂಬಂಧಿಸಿದಂತೆ ಸಾಂವಿಧಾನಿಕ ಪ್ರಶ್ನೆಗಳು ಉದ್ಭವಿಸುವ ಕಾರಣ ನನ್ನ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಪೀಠವು ತಿರಸ್ಕರಿಸಿರುವುದನ್ನು ಗೌರವಿಸುವ ಜೊತೆಗೆ ಸುಪ್ರೀಂ ಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಭ್ರಷ್ಟಾಚಾರದ ವಿರುದ್ಧದ ನನ್ನ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ  ಕೊಂಡೊಯ್ಯುತ್ತೇವೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.