ADVERTISEMENT

ವಿಜಯಪುರ: ಇಂಚಗೇರಿ ಮಠಕ್ಕೆ ದೊಡ್ಡಣ್ಣ ‌ಭೇಟಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2025, 14:00 IST
Last Updated 11 ಜನವರಿ 2025, 14:00 IST
ಹೊರ್ತಿ ಸಮೀಪದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಇಂಚಗೇರಿ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಹಿರಿಯ ನಟ ದೊಡ್ಡಣ್ಣ ಅವರನ್ನು ಮಠದ ರೇವಣಸಿದ್ಧೇಶ್ವರ ಮಹಾರಾಜರು ಸನ್ಮಾನಿಸಿದರು
ಹೊರ್ತಿ ಸಮೀಪದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಇಂಚಗೇರಿ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಹಿರಿಯ ನಟ ದೊಡ್ಡಣ್ಣ ಅವರನ್ನು ಮಠದ ರೇವಣಸಿದ್ಧೇಶ್ವರ ಮಹಾರಾಜರು ಸನ್ಮಾನಿಸಿದರು   

ಹೊರ್ತಿ: ಸಮೀಪದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಭಾವೈಕ್ಯ ತಾಣ ಶ್ರೀಕ್ಷೇತ್ರ ಇಂಚಗೇರಿ ಮಠಕ್ಕೆ ಶುಕ್ರವಾರ ಹಿರಿಯ ನಟ ದೊಡ್ಡಣ್ಣ ‌ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಅವರು, ‘ಅಹಂಕಾರ ಬಿಟ್ಟಾಗ ಆತ್ಮ ಸಾಕ್ಷಾತ್ಕಾರವಾಗುವುದು. ಮೊಬೈಲ್ ಗೀಳಿನಿಂದ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಓದುವ ರೂಢಿ ಬೆಳೆಸಿಕೊಳ್ಳಬೇಕು’ ಎಂದರು.

ಇಲ್ಲಿನ ಸ್ವಾತಂತ್ರ್ಯ ಸೇನಾನಿ ಮುರುಗೋಡ ಮಹಾದೇವರ ಹಾಗೂ ಭಾವೂಸಾಹೇಬರ, ಗಿಮಲ್ಲೇಶ್ವರ ಮಹಾರಾಜರ ದೇವಸ್ಥಾನಗಳ ಕತೃ ಗದ್ದುಗೆಗಳ ದರ್ಶನ ಪಡೆದರು. ಮಠದ ಪೀಠಾಧಿಪತಿ ರೇವಣಸಿದ್ಧೇಶ್ವರ ಮಹಾರಾಜರಿಗೆ ಸನ್ಮಾನಿಸಿದರು. ಕೆಲ ಕಾಲ ಮಠದ ಕುರಿತು, ಸಂತ-ಮಹಂತರ, ಗುರು ಮಹಾರಾಜರ ಹಾಗೂ ಅಧ್ಯಾತ್ಮ ಚಿಂತನ-ಮಂಥನದ ಮಹತ್ವದ ಕುರಿತು ಮತ್ತು ಆತ್ಮಜ್ಞಾನಿ, ಸ್ವಾತಂತ್ರ್ಯ ಸೇನಾನಿ ಮುರಗೋಡ ಮಹಾದೇವರ ಸ್ವಾತಂತ್ರ್ಯ ಚಳವಳಿಯಲ್ಲಿನ ಪ್ರಮುಖ ಪಾತ್ರದ ಕುರಿತು ಚರ್ಚೆ ನಡೆಸಿದರು. ಈ ವೇಳೆ ರೇವಣಸಿದ್ಧೇಶ್ವರ ಶ್ರೀ ದೊಡ್ಡಣ್ಣ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.

ADVERTISEMENT

ಈ ಸಂದರ್ಭದಲ್ಲಿ ನಿರ್ಮಾಪಕ ಮಾಧವಾನಂದ ಶೇಗುಣಸಿ, ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ, ಮಲ್ಲಿಕಾರ್ಜುನ ಕಾಲತಿಪ್ಪಿ, ಪ್ರಕಾಶ ಕಾಲತಿಪ್ಪಿ ಇದ್ದರು.

ಹೊರ್ತಿ:ಸಮೀಪದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಭಾವೈಕ್ಯತೆಯ ತಾಣ ಶ್ರೀ ಕ್ಷೇತ್ರ ಇಂಚಗೇರಿ ಮಠಕ್ಕೆ ಶುಕ್ರವಾರ ಹಿರಿಯ ನಟ ದೊಡ್ಡಣ್ಣ ಭೇಟಿ ನೀಡಿ ನಂತರ ಶ್ರೀಮಠದ ರೇವಣಸಿದ್ದೇಶ್ವರ  ಮಹಾರಾಜರೊಂದಿಗೆ  ಹಿರಿಯ ನಟ ದೊಡ್ಡಣ್ಣ ಅವರು ಮಾತನಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.