ADVERTISEMENT

‘ಕಾಂಗ್ರೆಸ್‌: ಕೇವಲ 20 ಮಂದಿ ಕುಳಿತು ತೀರ್ಮಾನ ಮಾಡಬೇಡಿ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 17:21 IST
Last Updated 7 ಜನವರಿ 2020, 17:21 IST
ಶಿವಾನಂದ ಪಾಟೀಲ
ಶಿವಾನಂದ ಪಾಟೀಲ   

ವಿಜಯಪುರ: ‘ಕೇವಲ 20 ಜನರು ಕುಳಿತುಕೊಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಮಾಡುವುದು ಸರಿಯಲ್ಲ’ ಎಂದು ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹೇಳಿದರು.

‘ಪಕ್ಷ ಈಗಾಗಲೇ ಅನೇಕ ಪಾಠಗಳನ್ನು ಕಲಿತಿದೆ. ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಎಚ್‌.ಕೆ.ಪಾಟೀಲ ಯಾರೇ ಇರಲಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಿದ್ದರಾಮಯ್ಯ ಅವರು ಸರ್ವ ಸಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಸಮ್ಮಿಶ್ರ ಸರ್ಕಾರ ಕಳೆದುಕೊಂಡಿದ್ದೇ ದುರ್ದೈವ. ಪತನಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಹೈಕಮಾಂಡ್‌ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಪಕ್ಷ ಸದೃಢವಿದ್ದಾಗ ಏನೇ ನಿರ್ಧಾರ ಕೈಗೊಂಡರೂ ಸರಿ. ಆದರೆ, ವೀಕ್ ಆದಾಗ ನಾವು ಎಚ್ಚೆತ್ತುಕೊಳ್ಳಬೇಕು. ಪಕ್ಷ ಮುನ್ನಡೆಸುವವರಿಗೆ ನನ್ನ ಬೆಂಬಲ ಸದಾ ಇರುತ್ತದೆ’ ಎಂದು ತಿಳಿಸಿದರು.

ADVERTISEMENT

‘ಉತ್ತರ ಕರ್ನಾಟಕಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಶ್ಯಕತೆ ಇಲ್ಲ. ಅದರ ಬದಲು ಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.