ಪ್ರಾತಿನಿಧಿಕ ಚಿತ್ರ
ವಿಜಯಪುರ: ಅಕ್ರಮ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ಜೋಡಿ ಕೊಲೆಯಾದ ಘಟನೆ ಸೋಮವಾರ ರಾತ್ರಿ ನಿಡಗುಂದಿ ತಾಲ್ಲೂಕಿನ ಮಾರಡಗಿ ತಾಂಡಾದ ಸಮೀಪ ನಡೆದಿದೆ.
ಮೃತರು ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35) ಹಾಗೂ ಪಾರ್ವತಿ ತಳವಾರ (38) ಎಂದು ಗುರುತಿಸಲಾಗಿದೆ.
ಗಣಿ ಗ್ರಾಮಕ್ಕೆ ಬರುವ ಮೊದಲೇ ಇಬ್ಬರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಯಾರೂ ಮಾಡಿದರು? ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.