ADVERTISEMENT

ವಿಜಯಪುರ: ಕಲ್ಲಿನಿಂದ ಜಜ್ಜಿ ಜೋಡಿ ಕೊಲೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 7:52 IST
Last Updated 13 ಅಕ್ಟೋಬರ್ 2025, 7:52 IST
   

ವಿಜಯಪುರ: ತಾಲ್ಲೂಕಿನ ಕನ್ನೂರ ಗ್ರಾಮದಲ್ಲಿ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.

ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಎಂಬುವವರ ಕೊಲೆ ಮಾಡಲಾಗಿದೆ. ಹಳೆಯ ವೈಷಮ್ಯದಿಂದ ಸಾಗರ್ ಹಾಗೂ ಇಸಾಕ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಅದೇ ಗ್ರಾಮದ ಈರನಗೌಡ ಎಂಬುವವರ ಮೇಲೆ ಈ ಇಬ್ಬರು ಯುವಕರು ತೀವ್ರವಾಗಿ ಹಲ್ಲೆ ಮಾಡಿದ್ದರು.

ADVERTISEMENT

ತೀವ್ರವಾಗಿ ಗಾಯಗೊಂಡಿದ್ದ ಈರನಗೌಡ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದರು. ಈರನಗೌಡ ಕೊಲೆಗೆ ಪ್ರತಿಕಾರವಾಗಿ ಇದೀಗ ಇಸಾಕ್ ಖರೇಷಿ ಹಾಗೂ ಸಾಗರ ಅವರ ಕೊಲೆ ನಡೆದಿರೋ‌ ಸಂಶಯ ವ್ಯಕ್ತವಾಗಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.