
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಅವರಿಗೆ ‘ಆರ್ಯುರ್ವೇದ ವಿಶ್ವ ರತ್ನ’ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಶುಕ್ರವಾರ ನಡೆದ ಎರಡನೇ ಆಯುರ್ವೇದ ವಿಶ್ವಸಮ್ಮೇಳನದಲ್ಲಿ ಡಾ. ಅಶೋಕ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಶ್ವ ಆಯುರ್ವೇದ ಸಮ್ಮೇಳನದ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಶಾಂತಿ ಆಯುರ್ವೇದ ಕೇಂದ್ರದ ವೈದ್ಯ ಡಾ. ಗಿರಿಧರ ಕಜೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
19 ವರ್ಷಗಳಿಂದ ಅಧ್ಯಾಪಕ ವೃತ್ತಿಯಲ್ಲಿ ತೊಡಗಿರುವ ಅವರು ಅನೇಕ ಸಂಶೋಧನೆಗಳನ್ನು ಕೈಗೊಂಡು 35ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ. ಅಲ್ಲದೇ, ವಿವಿಧ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಕರಾಗಿ ಸಂಶೋಧನಾ ಪರಿಣಿತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲ, ಪಿಎಚ್.ಡಿ ಪದವಿದರರಿಗೆ ಮಾರ್ಗದರ್ಶಕರಾಗಿಯೂ ಅನುಭವ ಹೊಂದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.