ADVERTISEMENT

‘ಅಂಬೇಡ್ಕರ್ ಚಿಂತನೆ ಪ್ರಸ್ತುತ’

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2020, 11:12 IST
Last Updated 14 ಏಪ್ರಿಲ್ 2020, 11:12 IST
ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್‌ನ ಪ್ರಧಾನ ಕಚೇರಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು
ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್‌ನ ಪ್ರಧಾನ ಕಚೇರಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು   

ವಿಜಯಪುರ: ನಗರದ ದಲಿತ ವಿದ್ಯಾರ್ಥಿ ಪರಿಷತ್‌ನ ಪ್ರಧಾನ ಕಚೇರಿಯಲ್ಲಿ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಡಾ.ಬಿ.ಆರ್‌.ಅಂಬೇಡ್ಕರ್ ಅವರ 129ನೇ ಜಯಂತಿ ಆಚರಿಸಲಾಯಿತು.

ವಕೀಲ ಶ್ರೀನಾಥ ಪೂಜಾರಿ ಮಾತನಾಡಿ, ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡಿ, ಸಂವಿಧಾನದ ಮೂಲಕ ವಿಶ್ವದ ದೊಡ್ಡ ಪ್ರಜಾಪ್ರಭುತ್ವಕ್ಕೆ ಅಂಬೇಡ್ಕರ್ ರೂಪು ನೀಡಿದ್ದರೆ ಎಂದರು.

ಟಿ.ಎಸ್.ಎಸ್ ಮುಖಂಡರಾದ ಇರ್ಫಾನ್ ಶೇಖ್ ಮಾತನಾಡಿ, ಕತ್ತಲು ಕವಿದಂತಿರುವ ಇಂದಿನ ಭಾರತವನ್ನು ಸಮಾನತೆ, ಸೌಹಾರ್ದತೆ ಮತ್ತು ಸಮೃದ್ಧಿಯ ಬೆಳಕಿನೆಡೆಗೆ ಕೊಂಡೊಯ್ಯಲು ಅಂಬೇಡ್ಕರ್ ಚಿಂತನೆಗಳಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ADVERTISEMENT

ಪರಿಷತ್‌ನ ಮುಖಂಡರಾದ ರಾಕೇಶ್ ಕುಮಟಗಿ, ಅಜಿತ್, ರೊಹಿತ ಕುಲಕರ್ಣಿ, ಮಾಧವ ಹಾಗೂ ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ರವಿ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.