ADVERTISEMENT

ವಿಜಯಪುರ: ಗುಣಮಟ್ಟದ ಕಾಮಗಾರಿಗೆ ಶಾಸಕ ಡಾ.ದೇವಾನಂದ ಚವ್ಹಾಣ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 12:58 IST
Last Updated 4 ಜನವರಿ 2022, 12:58 IST
ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಡಾ.ದೇವಾನಂದ ಚವ್ಹಾಣ ಅವರು ಮಂಗಳವಾರ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು
ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಡಾ.ದೇವಾನಂದ ಚವ್ಹಾಣ ಅವರು ಮಂಗಳವಾರ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು   

ವಿಜಯಪುರ: ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಡಾ.ದೇವಾನಂದ ಚವ್ಹಾಣ ಸೂಚಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪಂಚಾಯತ್ ರಾಜ್ಎಂಜಿನಿಯರಿಂಗ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚಡಚಣ ಸೇರಿದಂತೆನಾಗಠಾಣ ಕ್ಷೇತ್ರದ ಹಲವೆಡೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ಅನೇಕ ಕಾಮಗಾರಿಗಳು ನಡೆಯುತ್ತಿವೆ. ತಾಂತ್ರಿಕ ತೊಂದರೆಗಳಿಂದ ಕೆಲವೊಂದು ಕಾಮಗಾರಿಗಳು ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಕೂಡಲೇ ಈ ತಾಂತ್ರಿಕ ತೊಂದರೆ ನಿವಾರಣೆ ಮಾಡಿ ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕು, ಬಹುಮುಖ್ಯವಾಗಿ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಈ ಎರಡು ವಿಷಯಗಳನ್ನು ಪರಿಪಾಲನೆ ಮಾಡುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ, ಅಧಿಕಾರಿಗಳು ಸೂಚಿಸಿದರು.

ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಮೂಲಸೌಕರ್ಯಗಳ ಸಮಸ್ಯೆಗಳಿವೆ. ಈ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಿ ಅವುಗಳ ಪರಿಹಾರಕ್ಕಾಗಿ ತುರ್ತಾಗಿ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ಮತ್ತು ಚಡಚಣ, ಇಂಡಿ ಉಪ ವಿಭಾಗಗಳ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಸಹಾಯಕ ಎಂಜಿನಿಯರ್‌ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.