ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ 9.55ಕ್ಕೆ ಲಘು ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 2.4 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ತಿಳಿಸಿದೆ.
ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪನ ಸಂಭವಿಸಿದೆ. ಬಂಡೆಗಳು ಒಂದೆಡೆಯಿಂದ ಇನ್ನೊಂದೆಡೆಗೆ ಚಲಿಸಿದಂತೆ ದೊಡ್ಡ ಪ್ರಮಾಣದಲ್ಲಿ ಶಬ್ಧ ಕೇಳಿಬಂದಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಲಘು ಭೂಕಂಪವಾಗಿರುವುದರಿಂದ ಯಾವುದೇ ಅನಾಹುತವಾಗಿಲ್ಲ. ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ರೀತಿ ಆಗಾಗ ಲಘು ಭೂಕಂಪನ ಸಂಭವಿಸುತ್ತಿದ್ದು, ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.