
ದೇವರ ಹಿಪ್ಪರಗಿ: ಮಕ್ಕಳಿಗೆ ಶಿಕ್ಷಣದ ಜೊತೆಗೆ ಒಳ್ಳೆ ಸಂಸ್ಕಾರ ನೀಡಬೇಕು ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ವಸತಿ ನಿಲಯಗಳನ್ನು ನಿರ್ಮಿಸಿದೆ. ಇದರ ಉಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು. ನನ್ನ ಕ್ಷೇತ್ರದ ಪ್ರತಿಯೊಂದು ವಸತಿ ನಿಲಯಗಳಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು. ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಅವಧಿಯಲ್ಲಿ ಮತಕ್ಷೇತ್ರದ ಕಾಮನಕೇರಿ ಗ್ರಾಮದಲ್ಲಿ ₹7.75ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸುವ ಕಾಮಗಾರಿ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಭೂಮಿಪೂಜೆ ಮಾಡಲಾಗುವುದು. ಜೊತೆಗೆ ಅವಶ್ಯಕತೆ ಇರುವಲ್ಲಿ ವಸತಿ ನಿಲಯಗಳ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.
ನೂತನ ತಾಲ್ಲೂಕು ಕೇಂದ್ರದಲ್ಲಿ ಪ್ರಜಾಸೌಧ ನಿರ್ಮಾಣವಾದರೆ ಎಲ್ಲ ಕಚೇರಿಗಳು ಒಂದೆಡೆ ಪ್ರಾರಂಭವಾಗುತ್ತವೆ. ಇದರಿಂದ ಕ್ಷೇತ್ರದ ಜನತೆಗೆ ಅನುಕೂಲವಾಗುತ್ತದೆ. ಅದಕ್ಕಾಗಿ ಸತತ ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಮೌಲಾನ್ ಆಜಾದ್ ಶಾಲೆಗೆ ಮಂಜೂರಾತಿ ದೊರೆತಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ರವೀಂದ್ರ ಬಂಥನಾಳ. ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ ಯಲಗಾರ. ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ. ಕಾಶೀನಾಥ ಜಮಾದಾರ. ಸಿಂಧೂರ ಡಾಲೇರ. ನಿಲಯ ಮೇಲ್ವಿಚಾರಕ ನಾನಾಗೌಡ ಸಿದ್ದರೆಡ್ಡಿ, ನಿಲಯಪಾಲಕ ಎನ್.ಪಿ.ನಾಸಿ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದು ಮೇಲಿನಮನಿ, ಎಂಜಿನಿಯರ್ ಬಸವರಾಜ. ಪ್ರಕಾಶ ಮಲ್ಲಾರಿ. ಬಸವರಾಜ ದೇವಣಗಾಂವ, ಸೋಮು ದೇವೂರ. ವಿನೋದ ಚವ್ಹಾಣ, ಸೈಫನ್ ಮುಲ್ಲಾ. ಮುನೀರ್ ಅಹ್ಮದ್ ಮಳಖೇಡ, ಗಿರೀಶ ಕಟಕದೊಂಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.