ADVERTISEMENT

ಸಮಾಜದ ಪ್ರಗತಿಗೆ ಶಿಕ್ಷಣ ಅವಶ್ಯ: ಪ್ರಭುಗೌಡ ಲಿಂಗದಳ್ಳಿ

ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ: ಪ್ರಭುಗೌಡ ಲಿಂಗದಳ್ಳಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 2:19 IST
Last Updated 3 ಫೆಬ್ರುವರಿ 2026, 2:19 IST
ತಾಳಿಕೋಟೆ ಪಟ್ಟಣದ ಖಾಸ್ಗತೇಶ್ವರ ಸಭಾಭವನದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು 
ತಾಳಿಕೋಟೆ ಪಟ್ಟಣದ ಖಾಸ್ಗತೇಶ್ವರ ಸಭಾಭವನದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು    

ತಾಳಿಕೋಟೆ: ಯಾವುದೇ ಒಂದು ಸಮಾಜ ಸರ್ವಾಂಗೀಣ ಪ್ರಗತಿಯಾಗಲು ಆ ಸಮಾಜದ ಪ್ರತಿಯೊಬ್ಬರು ಶಿಕ್ಷಣವಂತರಾಗಿರುವುದು ಅವಶ್ಯವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಲಿಂಗದಳ್ಳಿ ಹೇಳಿದರು.

ಪಟ್ಟಣದ ಖಾಸ್ಗತೇಶ್ವರ ಸಭಾಭವನದಲ್ಲಿ ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೇ ವಜೀರ ಸಮಾಜ ವಿಜಯಪುರ ಹಾಗೂ ತಾಳಿಕೋಟೆ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ  ಮಾತನಾಡಿದರು.

ಸಮಾರಂಭ ಉದ್ಘಾಟಿಸಿದ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಭಾರತದ ಭವ್ಯ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಕಲಿಸಿಕೊಡಬೇಕು’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ ಹಂಡೇ ವಜೀರ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಸ್.ಪಾಟೀಲ, ಸಮಾಜ ಸಂಘಟಿಸಲು ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಕಲಬುರ್ಗಿ ಯುವ ಸಂಶೋಧಕ ಡಿ.ಎನ್. ಪಾಟೀಲ, ಎಂ.ಎಂ.ಬೆಳಗಲ್, ಜಯಶ್ರೀ ದೇವಿ ರಾಜುಗೌಡ ಪಾಟೀಲ, ಸಾನ್ನಿಧ್ಯ ವಹಿಸಿದ್ದ ಹಿರೂರ ಅನ್ನದಾನೇಶ್ವರ ಹಿರೇಮಠದ ಜಯ ಗುರು ಸಿದ್ದೇಶ್ವರ ಸ್ವಾಮೀಜಿ, ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ ಹಾಗೂ ಕಲಕೇರಿಯ ಗುರು ಮಡಿವಾಳೇಶ್ವರ ಶಿವಾಚಾರ್ಯರು ಮಾತನಾಡಿದರು.

ಇದೇ ಸಂದರ್ಭದಲ್ಲಿ 2024 25ನೇ ಸಾಲಿನಲ್ಲಿ ಎಸ್‌ಎಸ್ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ಸಮಾಜದ ಎಂಬಿಬಿಎಸ್ ಹಾಗೂ ಎಂ.ಡಿ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು

ಸಮಾಜದ ವತಿಯಿಂದ 2026ರ ನೂತನ ಕ್ಯಾಲೆಂಡರನ್ನು ಬಿಡುಗಡೆಗೊಳಿಸಲಾಯಿತು.

ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ಸಂ. ಬಿರಾದಾರ, ಸೋಮನಗೌಡ ಪಾಟೀಲ(ನಡಹಳ್ಳಿ), ಜಿ.ಎನ್,ಪಾಟೀಲ, ಎಚ್.ಎಸ್.ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಪಾಟೀಲ, , ಜಿಲ್ಲಾ ಘಟಕದ ಅಧ್ಯಕ್ಷ ಸಂಗನ ಗೌಡ ಕರಬಂಟನಾಳ, ಬಾಗಲಕೋಟ ಅಧ್ಯಕ್ಷ ವಿ.ಕೆ.ಪಾಟೀಲ,  ವಿ.ಎಸ್.ಕಾರ್ಚಿ, ಕಸಾಪ ಅಧ್ಯಕ್ಷ ಆರ್.ಎಲ್.ಕೊಪ್ಪದ, ಗೌರವಾಧ್ಯಕ್ಷ ಎಸ್.ಆರ್.ದೇಸಾಯಿ ಗೌಡ್ರು   ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.