ADVERTISEMENT

ಬಡ ವೈದ್ಯಕೀಯ ವಿದ್ಯಾರ್ಥಿಗಳಿಬ್ಬರಿಗೆ ಶೈಕ್ಷಣಿಕ ನೆರವು: ಎಂ.ಬಿ.ಪಾಟೀಲ ಭರವಸೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 16:04 IST
Last Updated 9 ಫೆಬ್ರುವರಿ 2022, 16:04 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ವಿಜಯಪುರ:ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಮೆಡಿಕಲ್ ಸೀಟು ಲಭಿಸಿದ್ದರೂ ಸಹ ಶುಲ್ಕ ಭರಿಸಲು ಆಗದೆ ಸಂಕಷ್ಟದಲ್ಲಿರುವತಾಳಿಕೋಟೆಯ ಅರುಣ ಕೊಟ್ರಪ್ಪ ದೇವಶೆಟ್ಟಿ ಅವರ ಶೈಕ್ಷಣಿಕ ವೆಚ್ಚವನ್ನೂ ತಾವೇ ಭರಿಸುವುದಾಗಿ ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಈ ಸಂಬಂಧ ‘ಪ್ರಜಾವಾಣಿ’ಗೆ ಕರೆ ಮಾಡಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅವರು, ವಿದ್ಯಾರ್ಥಿ ಅರುಣ ದೇವಶೆಟ್ಟಿ ಅವರ ಕೌಟುಂಬಿಕ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡ ಬಳಿಕ ಅವರಿಗೂ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ವಸತಿ, ಊಟ ಮತ್ತು ಶುಲ್ಕ ಸೇರಿದಂತೆ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದರು.

ಬಡ ಪ್ರತಿಭಾವಂತ ವಿದ್ಯಾರ್ಥಿಗಳಾದ ಅರುಣ ದೇವಶೆಟ್ಟಿ ಹಾಗೂ ಸತೀಶ ಇಬ್ಬರೂ ವಿದ್ಯಾರ್ಥಿಗಳು ವಿಜಯಪುರದ ಬಿಎಲ್‌ಡಿಇ ಸಂಸ್ಥೆಗೆ ಗುರುವಾರ ಬಂದು ನೆರವು ಪಡೆದುಕೊಳ್ಳುವಂತೆ ತಿಳಿಸಿದರು.

ಭಾರೀ ಪ್ರಶಂಸೆ: ಕಡು ಬಡತನದಲ್ಲಿ ಓದಿ ವೈದ್ಯಕೀಯ ಸೀಟು ಪಡೆದುಕೊಂಡಿರುವ ಇಬ್ಬರು ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ ಭರಿಸುವುದಾಗಿ ಶಾಸಕ ಎಂ.ಬಿ.ಪಾಟೀಲ ಅವರು ಘೋಷಣೆ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ, ಪ್ರಶಂಸೆಯ ಮಹಾಪೂರ ಹರಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.