ADVERTISEMENT

ಶಿಕ್ಷಕರ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಯತ್ನ: ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 2:23 IST
Last Updated 8 ಜನವರಿ 2026, 2:23 IST
ಸಿಂದಗಿ ಪಟ್ಟಣದ ಹಳೆಯ ಗುರುಭವನದ ಬಳಿ ಬುಧವಾರ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪನವರು ಶಿಕ್ಷಕರ ಭವನ ಕಾಮಗಾರಿ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಅಶೋಕ ಮನಗೂಳಿ, ಶಿಕ್ಷಕರ ಸಂಘ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಇದ್ದಾರೆ.
ಸಿಂದಗಿ ಪಟ್ಟಣದ ಹಳೆಯ ಗುರುಭವನದ ಬಳಿ ಬುಧವಾರ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪನವರು ಶಿಕ್ಷಕರ ಭವನ ಕಾಮಗಾರಿ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಅಶೋಕ ಮನಗೂಳಿ, ಶಿಕ್ಷಕರ ಸಂಘ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಇದ್ದಾರೆ.   

ಸಿಂದಗಿ: ಶಿಕ್ಷಕರ ಶೈಕ್ಷಣಿಕ ಸಮಸ್ಯೆಗಳು ಸಾಕಷ್ಟಿವೆ. ಅವುಗಳ ಪರಿಹಾರಕ್ಕಾಗಿ ಸಂಘಟಿತರಾಗಿ ಹೋರಾಟ ಮಾಡಿದಾಗಲೇ ಸರ್ಕಾರ ಬಗ್ಗುತ್ತದೆ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಹಳೆಯ ಗುರುಭವನದ ಬಳಿ ಬುಧವಾರ ಶಿಕ್ಷಕರ ಭವನ ಕಾಮಗಾರಿ ಶಿಲಾನ್ಯಾಸ ಮತ್ತು ಎಂಟು ಹೊಸ ಪ್ರೌಢಶಾಲೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಕರ ಭವನಕ್ಕಾಗಿ ಶಿಕ್ಷಕರ ಕಲ್ಯಾಣ ನಿಧಿ ₹ 50 ಲಕ್ಷ ಬಿಡುಗಡೆಗೊಳಿಸುವಲ್ಲಿ ತಾಂತ್ರಿಕ ಸಮಸ್ಯೆ ಬಾರದ ರೀತಿಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲ್ಲೂಕುಗಳಿಗೆ ಹೊಸ ಬಿಇಒ ಕಾರ್ಯಾಲಯ ನಿರ್ಮಾಣ ಕುರಿತು ಪ್ರಯತ್ನಿಸಲಾಗುವುದು. ಗ್ಯಾರಂಟಿ ಯೋಜನೆ ಹಾಗೂ ಆರ್ಥಿಕ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸಲಾಗುವುದು.

ADVERTISEMENT

‘ಮುಂಬರುವ ದಿನಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ  ಗಳ ಸ್ಥಾಪನೆಯ ಕುರಿತು ಚಿಂತನೆ ಮಾಡಲಾಗುವುದು ಎಂದರು.

₹ 57 ಲಕ್ಷ ಮಕ್ಕಳಿಗೆ ಮೊಟ್ಟೆ ಕೊಡಬೇಕಾಗಿದೆ. ಈ ವಿಷಯದಲ್ಲಿ ಶಿಕ್ಷಕರಿಗೆ ಸಾಕಷ್ಟು ಒತ್ತಡವಿರುವುದು ನಿಜ. ಮೊಟ್ಟೆ ದರ ಹೆಚ್ಚುವುದು ಮತ್ತು ದೊರೆಯದಿರುವ ಸಮಸ್ಯೆ ಕಂಡು ಬರುತ್ತಿದೆ ಎಂದು ತಿಳಿಸಿದರು.

‘ನಮ್ಮ ಸರ್ಮಾರ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಕರು ಎದುರಿಸುವ ಸಮಸ್ಯೆಗಳ ಪರಿಹಾರಕ್ಕಾಗಿ ವೇಗ ಹಂತ, ಹಂತವಾಗಿ ಜಾಸ್ತಿ ಮಾಡಲಾಗುವುದು’ ಎಂದು ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ ಮನಗೂಳಿ ಮಾತನಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾತನಾಡಿ, ರಾಜ್ಯದಲ್ಲಿ ಒಂದು ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರು ಬಡ್ತಿಯಿಂದ ವಂಚಿತರಾಗಿದ್ದಾರೆ. 8 ಸಾವಿರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹುದ್ದೆ ಖಾಲಿ ಇವೆ. ಈಗಿರುವ ಸರ್ಕಾರ ದಾನಚಿಂತಾಮಣಿ ಸರ್ಕಾರವಿದೆ. ಹೀಗಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿಕೊಂಡರು.

ಬಿಇಒ ಮಹಾಂತೇಶ ಯಡ್ರಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಿಂದಗಿ-ಆಲಮೇಲ-ದೇವರಹಿಪ್ಪರಗಿ ತಾಲ್ಲೂಕುಗಳು ಸೇರಿ 106 ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.
ಪ್ರೊ.ರವಿ ಗೋಲಾ ಕಾರ್ಯಕ್ರಮ ನಿರ್ವಹಿಸಿದರು.

‘ಶಿಕ್ಷಕರ ಭವನದ ಇತಿಹಾಸವೇ ಇದೆ’

‘ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಕರ ಭವನ ಕಾಮಗಾರಿ ಭೂಮಿಪೂಜೆ ಆಗಿದ್ದರೂ ಅದು ಮನೆಯ ಬೆಡ್ ರೂಂ ಅಳತೆಯಲ್ಲಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಭವನ ನಿರ್ಮಾಣಕ್ಕಾಗಿ ಪ್ರಥಮ ಹಂತದ ₹ 50 ಲಕ್ಷ ಅನುದಾನದೊಂದಿಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿಸಲಾಗುವುದು’ ಎಂದು ಶಾಸಕ ಅಶೋಕ ಮನಗೂಳಿ ಅವರು ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಪರೋಕ್ಷ ಟಾಂಗ್ ಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.