ADVERTISEMENT

ವಿಜಯಪುರ | ಕೋವಿಡ್‌ಗೆ ವೃದ್ದ ಸಾವು; 118 ಜನರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 14:52 IST
Last Updated 17 ಜುಲೈ 2020, 14:52 IST
   

ವಿಜಯಪುರ: ಜಿಲ್ಲೆಯಲ್ಲಿ 85 ವರ್ಷ ವಯಸ್ಸಿನ ವೃದ್ಧರೊಬ್ಬರು (ಪಿ35217) ಕೋವಿಡ್‌ನಿಂದ ಶುಕ್ರವಾರ ಸಾವನಪ್ಪಿದ್ದಾರೆ.

ತೀವ್ರ ಜ್ವರ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರು ಜುಲೈ 8 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

118 ಜನರಿಗೆ ಸೋಂಕು:ಜಿಲ್ಲೆಯಲ್ಲಿ ಶುಕ್ರವಾರ 118 ಜನರಿಗೆ ಕೋವಿಡ್‌ ಪಾಸಿಟಿವ್‌ ದೃಢವಾಗಿದ್ದು, ಇದುವರೆಗಿನ ಸೋಂಕಿತರ ಸಂಖ್ಯೆ 1238ಕ್ಕೆ ಏರಿಕೆಯಾಗಿದೆ. ಶುಕ್ರವಾರ 84 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 803 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.