ADVERTISEMENT

ವಿಜಯಪುರ | ಎಂಜಿನಿಯರಿಂಗ್‌, ಕೃಷಿ ಮಹಾವಿದ್ಯಾಲಯ ಆರಂಭ: ಕುಲಾಧಿಪತಿ ಬಸನಗೌಡ

ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ.ಪಾಟೀಲ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 5:12 IST
Last Updated 22 ಆಗಸ್ಟ್ 2025, 5:12 IST
ಬಸನಗೌಡ ಎಂ.ಪಾಟೀಲ 
ಬಸನಗೌಡ ಎಂ.ಪಾಟೀಲ    

ವಿಜಯಪುರ: ‘ಬಿ.ಎಲ್.ಡಿ.ಇ. ಡೀಮ್ಡ್‌ ವಿಶ್ವವಿದ್ಯಾಲಯವು ಮುಂದಿನ ಶೈಕ್ಷಣಿಕ ವರ್ಷ(2026-27)ದಿಂದ ಸೋಲಾಪುರ ಹೊಸ ಕ್ಯಾಂಪಸ್‌ನಲ್ಲಿ ಇನ್ನೊಂದು ಎಂಜಿನಿಯರಿಂಗ್ ಮಹಾವಿದ್ಯಾಲಯವನ್ನು ಸ್ಥಾಪಿಸಲು ಉದ್ದೇಶಿಸಿದೆ’ ಎಂದು ಕುಲಾಧಿಪತಿ ಬಸನಗೌಡ ಎಂ.ಪಾಟೀಲ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಈ ನೂತನ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌, ಡಾಟಾ ಸೈನ್ಸ್‌, ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಅಂಡ್‌ ಮಷಿನ್‌ ಲರ್ನಿಂಗ್‌(ಎಐಎಂಎಲ್‌), ಇನ್ಪರ್ಮೆಶನ್‌ ಸೈನ್ಸ್ ಅಂಡ್‌ ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್ ಪದವಿ ವಿಭಾಗಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ’ ಎಂದರು.

‌ಈ ಕಾಲೇಜು ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಇಂದಿನ ಉದ್ಯಮದ ಅಗತ್ಯತೆಗಳನ್ನು ಪೂರೈಸಲು ಸಿದ್ಧಪಡಿಸಿದ ಪಠ್ಯಕ್ರಮವನ್ನು ವಿನ್ಯಾಸಗೊಳಲಿಸಲಾಗುವುದು. ಎ.ಐ.ಸಿ.ಟಿ.ಇ ಪ್ರಕಾರ ಅಗತ್ಯವಿರುವ ಮೂಲಸೌಕರ್ಯಗಳನ್ನು ಕೂಡ ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಕೃಷಿ ಮಹಾವಿದ್ಯಾಲಯ:

ರಾಜ್ಯದಲ್ಲಿ ಇದುವರೆಗೆ ಖಾಸಗಿ ಕೃಷಿ ಕಾಲೇಜುಗಳು ಇರಲಿಲ್ಲ. ಆದರೆ, ಈಗ ಸರ್ಕಾರ ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡಲು ಪ್ರಾರಂಭಿಸಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ರೈತರಿಗೆ ಸೇವೆ ಸಲ್ಲಿಸಲು ಮತ್ತು ಕೃಷಿಯನ್ನು ಪ್ರೋತ್ಸಾಹಿಸಲು, ಬಿಎಲ್‌ಡಿಇಯಿಂದ ಹೊಸ ಕೃಷಿ ಮಹಾವಿದ್ಯಾಲಯವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐ.ಸಿ.ಎ.ಆರ್.) ಪ್ರಕಾರ ಅಗತ್ಯವಿರುವ ಮೂಲಸೌಕರ್ಯ ಮತ್ತು ಭೂಮಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ಕ್ಯಾಂಪಸ್:

ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್‍ ಅನ್ನು ಸ್ಥಾಪಿಸಲಿದೆ ಎಂದರು.

ಎಂಜಿನಿಯರಿಂಗ್‌, ಕಂಪ್ಯೂಟರ್‌ ಅಪ್ಲಿಕೇಷನ್ಸ್‌, ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌, ಫಾರ್ಮಸಿ, ಕಾನೂನು, ಆರ್ಕಿಟೆಕ್ಚರ್‌, ಡಿಸೈನ್‌ ಅಂಡ್‌ ಅಪ್ಲೈಡ್‌ ಸೈನ್ಸ್ ಸೇರಿದಂತೆ ಹಂತ ಹಂತವಾಗಿ 8 ರಿಂದ 10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತರರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಡೈರಿ ಫಾರ್ಮಿಂಗ್:

ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಗ್ರಾಮೀಣ ಜನರಿಗೆ ನಿಯಮಿತ ಆದಾಯ ಮತ್ತು ಉದ್ಯೋಗದ ವಿಷಯದಲ್ಲಿ ರೈತರಿಗೆ ಸಹಾಯ ಮಾಡುವ, ಪೌಷ್ಟಿಕ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪೂರೈಸುವ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವ ಒಟ್ಟಾರೆ ಗ್ರಾಮೀಣ ಅಭಿವೃದ್ಧಿ ಮತ್ತು ಪೌಷ್ಟಿಕಾಂಶಕ್ಕಾಗಿ ಹೆಸರಾಂತ ಕಂಪನಿಯ ಸಹಾಯದಿಂದ ‘ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಡೈರಿ ಫಾರ್ಮಿಂಗ್’ ಅನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದರು.

ಇತರ ಜಿಲ್ಲೆಗಳಲ್ಲಿ ಸ್ಥಾಪನೆ:

ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಮುಂಬರುವ ವರ್ಷಗಳಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರಗಳಲ್ಲಿ ನರ್ಸಿಂಗ್, ಫಾರ್ಮಸಿ, ಎಂಜಿನಿಯರಿಂಗ್ ಇತ್ಯಾದಿ ಹೊಸ ಆರೋಗ್ಯ ವಿಜ್ಞಾನ ಮತ್ತು ತಾಂತ್ರಿಕ ಕಾಲೇಜುಗಳನ್ನು ಪ್ರಾರಂಭಿಸಲು ಕೂಡ ಯೋಜನೆಯನ್ನು ರೂಪಿಸಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ಕ್ಯಾಂಪಸ್ ಶೀಘ್ರ ಉ.ಕ. ಜಿಲ್ಲೆಗಳಲ್ಲಿ ಬಿಎಲ್‌ಡಿಇ ಶಿಕ್ಷಣ ಸಂಸ್ಥೆ ಸ್ಥಾಪನೆ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಡೈರಿ ಫಾರ್ಮಿಂಗ್ ಆರಂಭ
ಬಿಎಲ್‌ಡಿಇ ತನ್ನ 115 ವರ್ಷಗಳ ದೀರ್ಘ ಪ್ರಯಾಣದಲ್ಲಿ ಈ ಭಾಗದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯುವ ಮೂಲ ಉದ್ದೇಶದ ಜೊತೆಗೆ ಆಧುನಿಕ ದಿನಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವತ್ತ ಸಂಸ್ಥೆ ಮುಂಚೂಣಿಯಲ್ಲಿದೆ
ಬಸನಗೌಡ ಎಂ.ಪಾಟೀಲಕುಲಾಧಿಪತಿಬಿ.ಎಲ್.ಡಿ.ಇ. ಡೀಮ್ಡ್‌ ವಿಶ್ವವಿದ್ಯಾಲಯ ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.