ADVERTISEMENT

ಸೈನಿಕ ಶಾಲೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 19:30 IST
Last Updated 10 ನವೆಂಬರ್ 2020, 19:30 IST

ವಿಜಯಪುರ: 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ 6 ಮತ್ತು 9ನೇ ತರಗತಿಗಳ ಪ್ರವೇಶಕ್ಕಾಗಿ ದೇಶದಾದ್ಯಂತ ಇರುವ 33 ಸೈನಿಕ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ ಎಂದು ಎನ್‍ಟಿಎ ಹಿರಿಯ ನಿರ್ದೇಶಕರು ತಿಳಿಸಿದ್ದಾರೆ.

ಪರೀಕ್ಷೆಯು 2021ರ ಜನವರಿ 10ರಂದು ನಡೆಯಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ₹400, ಇತರರಿಗೆ ₹550 ಪರೀಕ್ಷಾ ಶುಲ್ಕಇರಲಿದೆ.

ಪರೀಕ್ಷೆಗೆ ಸಂಬಂಧಿಸಿದ ಯೋಜನೆ, ಕಾಲಾವಧಿ, ಮಾಧ್ಯಮ, ಪರೀಕ್ಷೆಯ ಪಠ್ಯಕ್ರಮ, ಸೈನಿಕ ಶಾಲೆಗಳ ಪಟ್ಟಿ ಹಾಗೂ ತಾತ್ಕಾಲಿಕ ಪ್ರವೇಶ, ಸೀಟುಗಳ ಮೀಸಲು, ಪರೀಕ್ಷೆ ನಡೆಯುವ ನಗರಗಳು, ಕೇಂದ್ರಗಳು, ಮುಖ್ಯ ದಿನಾಂಕ ಇತ್ಯಾದಿ ವೆಬ್‍ಸೈಟ್‌ನಲ್ಲಿ ಲಭ್ಯವಿರುತ್ತವೆ. ಪರೀಕ್ಷೆಗಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ವಿವರವಾದ ಮಾಹಿತಿ ಕೈಪಿಡಿಯನ್ನು ಓದಿಕೊಂಡಿರಬೇಕು. ಆನ್‍ಲೈನ್ ಮೂಲಕ ಮಾತ್ರ ವೆಬ್‍ಸೈಟ್https://aissee.nta.nic. ಸಹಾಯದಿಂದ ನ.19ರೊಳಗೆ ಅರ್ಜಿ ಸಲ್ಲಿಸಬೇಕು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.