ADVERTISEMENT

ಗಣರಾಜೋತ್ಸವಕ್ಕೆ ಅಗತ್ಯ ಸಿದ್ಧತೆ: ಸಿಇಒ 

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 11:07 IST
Last Updated 13 ಜನವರಿ 2022, 11:07 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಗಣರಾಜೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮುಖಂಡ ಅಡಿವೆಪ್ಪ ಸಾಲಗಲ್‌ ಮಾತನಾಡಿದರು 
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಗಣರಾಜೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮುಖಂಡ ಅಡಿವೆಪ್ಪ ಸಾಲಗಲ್‌ ಮಾತನಾಡಿದರು    

ವಿಜಯಪುರ: ಜ.26 ರ ಗಣರಾಜೋತ್ಸವವನ್ನು ಕೋವಿಡ್ ಮಾರ್ಗಸೂಚಿಗಳನ್ವಯ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಯಾವುದೇ ಅನಗತ್ಯ ಗೊಂದಲಗಳಾಗದಂತೆ ಎಚ್ಚರಿಕೆ ವಹಿಸಿ, ಸುವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಗಣರಾಜೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಲಾಗಿರುವ ಕರ್ತವ್ಯಗಳನ್ನು ಪರಸ್ಪರ ಸಮನ್ವಯತೆ ಸಾಧಿಸಿ, ನಿರ್ವಹಿಸುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.

ADVERTISEMENT

ತೊರವಿಯ ಅಕ್ಕಮಹಾದೇವಿ ಮಹಿಳಾ ವಿವಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನಡೆಯಲಿದೆ ಎಂದರು.

ಸಂವಿಧಾನದ ಪ್ರಸ್ತಾವನೆಯ ಸಂದೇಶದ ಕರಪತ್ರ ಮುದ್ರಣ ಮಾಡಿ ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲು. ಸಂವಿಧಾನದ ಪ್ರಸ್ತಾವನೆಯ ಫಲಕಗಳನ್ನು (ಬ್ಯಾನರ್, ಫ್ಲೆಕ್ಸ್) ನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಲು ಕ್ರಮವಹಿಸುವಂತೆ ಸೂಚಿಸಿದರು.

ಪೊಲೀಸ್ ಇಲಾಖೆಯಿಂದ ಪಥಸಂಚಲನ. ಅವಶ್ಯಕ ಪೊಲೀಸ್ ಬಂದೋಬಸ್ತ್‌ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಕೋವಿಡ್ ಮಾರ್ಗಸೂಚಿಯನ್ವಯ ಪ್ರತ್ಯೇಕವಾಗಿ ಆಸನಗಳ ವ್ಯವಸ್ಥೆ ಮಾಡಿ ಫಲಕಗಳನ್ನು ಅಳವಡಿಸಲು ಕ್ರಮಕೈಗೊಳ್ಳಬೇಕು ಎಂದರು.

ಗಣರಾಜೋತ್ಸವ ದಿನದಂದು ನಗರದ ಪ್ರಮುಖ ರಸ್ತೆಗಳ ಸ್ವಚ್ಛತೆ ಹಾಗೂ ವಿದ್ಯುತ್ ದೀಪಾಲಂಕಾರ, ಕಾರ್ಯಕ್ರಮದ ಸ್ಥಳವಾದ ಅಕ್ಕಮಹಾದೇವಿ ಮಹಿಳಾ ವಿವಿ ಕ್ರೀಡಾಂಗಣದಲ್ಲಿ ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಆರೋಗ್ಯದ ಮುಂಜಾಗ್ರತಾ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿ ಹಾಗೂ ಅಂಬುಲೆನ್ಸ್ ವ್ಯವಸ್ಥೆ, ಕಾರ್ಯಕ್ರಮದ ಆವರಣ ಪ್ರವೇಶಿಸುವ ಎಲ್ಲರಿಗೂ ಸ್ಕ್ರೀನಿಂಗ್, ಕೈಗಳಿಗೆ ಸ್ಯಾನಿಟೈಜರ್ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್-19 ಸಂದರ್ಭದಲ್ಲಿ ಲಸಿಕೆ ನೀಡುವಲ್ಲಿ ಶ್ಲಾಘನೀಯ ಕಾರ್ಯಮಾಡಿದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನಿಸಲಾಗುವುದು ಎಂದು ಅವರು ಸಭೆಗೆ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಡಿವೈಎಸ್‌ಪಿ ಲಕ್ಷ್ಮೀ ನಾರಾಯಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಕೆ ಚವ್ಹಾಣ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ ಲೋಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ ಹಾಗೂ ಮುಖಂಡರಾದ ಅಡಿವೆಪ್ಪ ಸಾಲಗಲ್‌, ಎಂ.ಸಿ ಮುಲ್ಲಾ, ಸೋಮನಗೌಡ ಕಲ್ಲೂರ, ಭೀಮರಾವ ಜಿಗಜಿಣಗಿ, ಗಿರೀಶ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.