ADVERTISEMENT

ಗುಣಾತ್ಮಕ ಶಿಕ್ಷಣದಿಂದ ಉತ್ಕೃಷ್ಟ ಸಮಾಜ

ಶಾಲಾ ಪ್ರಾರಂಭೋತ್ಸವ: ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:57 IST
Last Updated 29 ಮೇ 2025, 14:57 IST
ವಿಜಯಪುರ ನಗರದ ಎಂಪಿಎಸ್ ನಂ-6 ಇಬ್ರಾಹಿಂಪುರ ಶಾಲೆಯಲ್ಲಿ ಗುರುವಾರ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಅವರು ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದರು
ವಿಜಯಪುರ ನಗರದ ಎಂಪಿಎಸ್ ನಂ-6 ಇಬ್ರಾಹಿಂಪುರ ಶಾಲೆಯಲ್ಲಿ ಗುರುವಾರ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಅವರು ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದರು   

ಪ್ರಜಾವಾಣಿ ವಾರ್ತೆ

ವಿಜಯಪುರ: ‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ಕೃಷ್ಟ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಹೇಳಿದರು.

ನಗರದ ಎಂಪಿಎಸ್ ನಂ-6 ಇಬ್ರಾಹಿಂಪುರ ಶಾಲೆಯಲ್ಲಿ ಗುರುವಾರ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿ ಮಾತನಾಡಿದರು.

ADVERTISEMENT

‘ಬಾಲ್ಯದಲ್ಲೇ ಉತ್ತಮ ಶಿಕ್ಷಣ ದೊರೆತರೆ ಭವಿಷ್ಯದಲ್ಲಿ ಅವರಿಗೆ ಅನುಕೂಲವಾಗಲಿದೆ. ಗುಂಪು ಚಟುವಟಿಕೆ, ಬರವಣಿಗೆಗೆ ಆದ್ಯತೆ ನೀಡಬೇಕು. ಪರೀಕ್ಷೆ ಫಲಿತಾಂಶ ಸುಧಾರಣೆ ಜೊತೆಗೆ ಗುಣಮಟ್ಟದ ಶಿಕ್ಷಣಕ್ಕೆ ಶ್ರಮಿಸಲಾಗುತ್ತದೆ’ ಎಂದರು.

ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮಾತನಾಡಿ, ‘ಸರ್ಕಾರಿ ಶಾಲೆಗಳಿಗೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಹಾಗೂ ‘ನನ್ನ ಶಾಲೆ ನನ್ನ ಜವಾಬ್ದಾರಿ’ ಕುರಿತು ಪಾಲಕರಿಗೆ ಹಾಗೂ ಮಕ್ಕಳಿಗೆ ತಿಳಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪರಿಹಾರ ಬೋಧನೆಯ ಮೂಲಕ ಮುಖ್ಯವಾಹನಿಗೆ ತರಬೇಕು’ ಎಂದು ತಿಳಿಸಿದರು.

ಪೊಲೀಸ್‌ ಅಧಿಕಾರಿ ಮಂಜುನಾಥ ಗುಳೇದಗುಡ್ಡ, ನಗರ ಕ್ಷೇತ್ರ ಸಮನ್ವಯಾಧಿಕಾರಿ ರೆಹಮಾನ ದರ್ಗಾ, ದೈಹಿಕ ಶಿಕ್ಷಣಾಧಿಕಾರಿ ಬಿರಾದಾರ, ಎಲ್.ಎಸ್. ಬಿರಾದಾರ, ಪಿ.ಜಿ. ಹಿರೇಮಠ, ಎ.ಕೆ. ದಳವಾಯಿ, ಸವಿತಾ ಗೋಡೇಕರ, ಎಲ್.ಜಿ. ಶೀಳಿನ, ಬಸೀರ ನದಾಫ, ಬಸವರಾಜ ಗಿರಿನಿವಾಸ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.