ADVERTISEMENT

ವಿಜಯಪುರ: ವಿದ್ಯಾರ್ಥಿಗಳ ಬಸ್‌ ಪಾಸ್‌ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 14:21 IST
Last Updated 1 ಏಪ್ರಿಲ್ 2022, 14:21 IST

ವಿಜಯಪುರ: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯು ಏಪ್ರಿಲ್‌ 18ರ ವರೆಗೆ ಇರುವುದರಿಂದ ಅಲ್ಲಿಯ ವರೆಗೆ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಸೌಲಭ್ಯವನ್ನು ವಿಸ್ತರಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿತರಿಸಲಾಗಿರುವ ಬಸ್‌ ಪಾಸ್‌ ಅವಧಿ ಮಾರ್ಚ್‌ 31ಕ್ಕೆ ಮುಕ್ತಾಯವಾಗಿದೆ. ಆದರೆ, ಪರೀಕ್ಷೆಗಳು ಏಪ್ರಿಲ್‌ 18ರ ವರೆಗೆ ಇರುವುದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕೇಂದ್ರ ಕಚೇರಿಯ ನಿರ್ದೇಶನದಂತೆ ಬಸ್‌ ಪಾಸ್‌ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಬಸ್‌ ಚಾಲಕರು, ನಿರ್ವಾಹಕರು ಮತ್ತು ಸಂಬಂಧಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಸಹಕರಿಸಬೇಕು. ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರ(ಹಾಲ್‌ ಟಿಕೆಟ್‌) ವನ್ನು ಪರಿಶೀಲಿಸಿ, ಪಾಸ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಪ್ರಯಾಣಿಸಲು ಅನುಮತಿ ನೀಡುವಂತೆ ಹಾಗೂ ಯಾವುದೇ ದೂರುಗಳು ಬರದಂತೆ ಕ್ರಮಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಬಸ್‌ನಿಂದ ಇಳಿಸಿದ ನಿರ್ವಾಹಕರು:ಏಪ್ರಿಲ್‌ 1ರಂದು ನಡೆದ ಪ್ರಥಮ ಪಿಯುಸಿ ಪರೀಕ್ಷೆಗೆ ಹಾಜರಾಗಲು ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣಿಸಲು ಅನೇಕ ಕಡೆಗಳಲ್ಲಿ ಬಸ್‌ ನಿರ್ವಾಹಕರು ಅವಕಾಶ ನೀಡದೇ, ವಿದ್ಯಾರ್ಥಿಗಳನ್ನು ಕೆಳಗಿಳಿಸಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.