ADVERTISEMENT

ವಿಜಯಪುರ: ಮಹಿಳಾ ಸ್ವಸಹಾಯ ಸಂಘಗಳಿಗೆ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 16 ಜನವರಿ 2025, 12:58 IST
Last Updated 16 ಜನವರಿ 2025, 12:58 IST
ವಿಜಯಪುರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಸದಸ್ಯ  ಸುನೀಲಗೌಡ ಪಾಟೀಲ ಅವರು ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು
ವಿಜಯಪುರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಸದಸ್ಯ  ಸುನೀಲಗೌಡ ಪಾಟೀಲ ಅವರು ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು   

ವಿಜಯಪುರ: ಮಹಿಳಾ ಸ್ವಸಹಾಯ ಸಂಘಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದಾಗಿ ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಗುರುವಾರ 23 ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಗೆ ನೋಂದಣಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

‘ಸಚಿವ ಎಂ.ಬಿ. ಪಾಟೀಲ ಅವರು ಮಹಿಳಾ ಕಲ್ಯಾಣ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಮಹಿಳಾ ಸ್ವಸಹಾಯ ಸಂಘಗಳ ಉಚಿತ ನೋಂದಣಿಗೆ ನೆರವು ನೀಡಲಾಗಿದೆ. ಬಬಲೇಶ್ವರ ಮತಕ್ಷೇತ್ರದ 210 ಮಹಿಳಾ ಸ್ವಸಹಾಯ ಸಂಘಗಗಳಿಗೆ ಹೈನುಗಾರಿಕೆ, ಕುರಿಸಾಕಣೆ ಸೇರಿದಂತೆ ಮಹಿಳೆಯರು ಗೃಹ ಉದ್ಯೋಗ ಕೈಗೊಳ್ಳಲು ಸರ್ಕಾರದ ಯೋಜನೆಗಳನ್ನು ಒದಗಿಸಲು ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

ADVERTISEMENT

ತಿಕೋಟಾ, ಬರಟಗಿ, ಯತ್ನಾಳ, ಯಕ್ಕುಂಡಿ, ಶೇಗುಣಸಿ, ಕಾತ್ರಾಳ, ಕರಾಡದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳ 23 ಸ್ವಸಹಾಯ ಸಂಘಗಳಿಗೆ ಸುನೀಲಗೌಡ ಪಾಟೀಲ ನೋಂದಣಿ ಪ್ರಮಾಣಪತ್ರ ವಿತರಿಸಿದರು.

ಎಂ.ಸಿ. ತಳವಾರ, ಸಂಗಮೇಶ ಕೋಲಕಾರ, ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಅಧ್ಯಕ್ಷರು, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.