ADVERTISEMENT

ಸುಳ್ಳು ಸುದ್ದಿ ಹರಡದಿರಿ: ಮಾಜಿ ಶಾಸಕ ಎ.ಎಸ್‌.ಪಾಟೀಲ್

ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 4:54 IST
Last Updated 28 ಜುಲೈ 2025, 4:54 IST
ಮುದ್ದೇಬಿಹಾಳ ಪಟ್ಟಣದ ಅರಿಹಂತ ಚಾರಿಟಬಲ್ ಟ್ರಸ್ಟ್ ಸಂಸ್ಥೆಯಲ್ಲಿ ಕಾನಿಪ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಸನ್ಮಾನಿಸಲಾಯಿತು
ಮುದ್ದೇಬಿಹಾಳ ಪಟ್ಟಣದ ಅರಿಹಂತ ಚಾರಿಟಬಲ್ ಟ್ರಸ್ಟ್ ಸಂಸ್ಥೆಯಲ್ಲಿ ಕಾನಿಪ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಸನ್ಮಾನಿಸಲಾಯಿತು   

ಮುದ್ದೇಬಿಹಾಳ: ‘ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ. ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಸುಳ್ಳು ಸುದ್ದಿಗಳನ್ನು ಹರಡಬಾರದು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ (ನಡಹಳ್ಳಿ) ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರೊ.ರಾಜನಾರಾಯಣ ನಲವಡೆ ಮಾತನಾಡಿ, ‘ಪತ್ರಕರ್ತರಾದವರು ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು’ ಎಂದರು.

ADVERTISEMENT

ಅರಿಹಂತ ಸಂಸ್ಥೆಯ ಅಧ್ಯಕ್ಷ ಮಹಾವೀರ ಸಗರಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕ ಮಾತನಾಡಿದರು. ಇ

ದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಕುಂಬಾರಗೆ ಪ್ರತಿಭಾ ಪುರಸ್ಕಾರ, ತಾಲ್ಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ್ ಬೆಣ್ಣೂರು, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಬಿ.ವಡವಡಗಿ (ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ, ಪುಂಡಲಿಕ ಮುರಾಳ, ಬಸವರಾಜ ಹುಲಗಣ್ಣಿ, ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.