ADVERTISEMENT

ವೈದ್ಯಕೀಯ ವಿದ್ಯಾರ್ಥಿಗಳಿಗೆ ‘ಕುಟುಂಬ ದತ್ತು’

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 15:30 IST
Last Updated 23 ಜುಲೈ 2022, 15:30 IST
ವಿಜಯಪುರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ್ ವೈದ್ಯಕೀಯ ಆಸ್ಪತ್ರೆ, ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದಿಂದ ರಂಭಾಪುರ ಗ್ರಾಮದಲ್ಲಿ ಏರ್ಪಡಿಸಿದ್ದ ‘ಕುಟುಂಬ ದತ್ತು’ ಪಡೆಯುವ ಕಾರ್ಯಕ್ರಮದಲ್ಲಿ ಉಪಕುಲಪತಿ ಡಾ.ಆರ್.ಎಸ್.ಮುಧೋಳ ಮಾತನಾಡಿದರು.
ವಿಜಯಪುರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ್ ವೈದ್ಯಕೀಯ ಆಸ್ಪತ್ರೆ, ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದಿಂದ ರಂಭಾಪುರ ಗ್ರಾಮದಲ್ಲಿ ಏರ್ಪಡಿಸಿದ್ದ ‘ಕುಟುಂಬ ದತ್ತು’ ಪಡೆಯುವ ಕಾರ್ಯಕ್ರಮದಲ್ಲಿ ಉಪಕುಲಪತಿ ಡಾ.ಆರ್.ಎಸ್.ಮುಧೋಳ ಮಾತನಾಡಿದರು.   

ವಿಜಯಪುರ:ವೈದ್ಯರಾಗುವವರು ಕೇವಲ ಪುಸ್ತಕದಿಂದ ತಿಳಿದುಕೊಂಡರೆ ಸಾಲದು. ನೈಜ ಜೀವನದ ಅನುಭವದಿಂದ ಕಲಿತುಕೊಂಡರೆ ಶ್ರೇಷ್ಠ ವೈದ್ಯರಾಗಲು ಸಾಧ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಉಪಕುಲಪತಿ ಡಾ.ಆರ್.ಎಸ್.ಮುಧೋಳ ಹೇಳಿದರು.

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ್ ವೈದ್ಯಕೀಯ ಆಸ್ಪತ್ರೆ, ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದಿಂದ ರಂಭಾಪುರ ಗ್ರಾಮದಲ್ಲಿ ಏರ್ಪಡಿಸಿದ್ದ ‘ಕುಟುಂಬ ದತ್ತು’ಪಡೆಯುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಕುಟುಂಬದ ಸದಸ್ಯರನ್ನು ದತ್ತು ಪಡೆದು ಆರೋಗ್ಯ ಸೇವೆ ಒದಗಿಸುವ ಜವಾಬ್ದಾರಿ ವೈದ್ಯಕೀಯ ವಿದ್ಯಾರ್ಥಿಗಳದ್ದಾಗಿದೆ. ವೈದ್ಯಕೀಯ ಸೇವೆಯೊಂದಿಗೆ ಕುಟುಂಬದ ಆರೋಗ್ಯ ರಕ್ಷಣೆಯ ಕಾಳಜಿ ಇರುತ್ತದೆ. ವಿದ್ಯಾರ್ಥಿಗಳು ಕುಟುಂಬದ ಪ್ರತಿಯೊಬ್ಬರ ಆರೋಗ್ಯ ಸ್ಥಿತಿಗಳನ್ನು ಕಲೆ ಹಾಕಿ, ಬದಲಾವಣೆ ತರಲು ಪ್ರಯತ್ನಿಸುತ್ತಾರೆ. ಗ್ರಾಮೀಣ ಪ್ರದೇಶದ ರೋಗಿಗಳಿಗೆ ಆರೋಗ್ಯದ ವಿಚಾರದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆ ಸಂಪೂರ್ಣ ಸಹಕಾರಿವಿದೆ ಎಂದು ಭರವಸೆ ನೀಡಿದರು.

ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಎಂ.ಸಿ.ಯಡವಣ್ಣವರ ಮಾತನಾಡಿ, ಪುಸ್ತಕದಿಂದ ಕಲಿಯುವುದಕ್ಕಿಂತ ಸಮುದಾಯದ ಸ್ಥಿತಿಗತಿಗಳ ಮೇಲೆ ಹೇಗೆ ಆರೋಗ್ಯ ನಿರ್ಧಾರವಾಗುತ್ತದೆ. ಅದಕ್ಕಾಗಿ ವೈದ್ಯ ವಿದ್ಯಾರ್ಥಿಗಳು ಗ್ರಾಮಸ್ಥರ ಮನೆಗಳಿಗೆ ಭೇಟಿ ನೀಡಿ ಪ್ರಾಯೋಗಿಕವಾಗಿ ಅರ್ಥೈಸಿಕೊಂಡು ಸಮಾಜಮುಖಿ ವೈದ್ಯರಾಗಲು ಸಾಧ್ಯ ಎಂದರು.

ADVERTISEMENT

ಪ್ರತಿ ವಿದ್ಯಾರ್ಥಿಗೆ ಎರಡು ಕುಟುಂಬಗಳನ್ನು ದತ್ತು ಕೊಡಲಾಗುತ್ತದೆ. ಇಂದು 200 ವಿದ್ಯಾರ್ಥಿಗಳಿಗೆ 400 ಕುಟುಂಬಗಳನ್ನು ದತ್ತು ಕೊಡಲಾಗಿದೆ ಎಂದರು.

ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಕವಿತಾ ದೊಡಮನಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಬಿ.ಎ.ಹಿತ್ತನಹಳ್ಳಿ, ಗ್ರಾಮದ ಹಿರಿಯ ಮುಖಂಡ ಬಾಪುಗೌಡ ಪಾಟೀಲ, ಡಿ.ಎ.ಪಾಟೀಲ್, ಎ.ಜಿ.ಲಿಂಗದಳ್ಳಿ, ಡಾ.ಪೂಜಾ ತೊದಲಬಾಗಿಯೋಗಾಪುರ ಆರೋಗ್ಯ ಕೇಂದ್ರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.