ಸಿಂದಗಿ (ವಿಜಯಪುರ ಜಿಲ್ಲೆ): ‘ಕಾಂಗ್ರೆಸ್ ಪಕ್ಷದಲ್ಲಿನ ವಂಶ ಪಾರಂಪರ್ಯ ರಾಜಕಾರಣ ಬಿಜೆಪಿಯಲ್ಲೂ ಪ್ರವೇಶಿಸಿದ್ದು ದುರಂತ’ ಎಂದು ಸಂಸದ ರಮೇಶ ಜಿಗಜಿಣಗಿ ವಿಷಾದಿಸಿದರು.
ಸಿಂದಗಿ ತಾಲ್ಲೂಕಿನ ಯಂಕಂಚಿ ಗ್ರಾಮದಲ್ಲಿ ಸೋಮವಾರ ಬಿಜೆಪಿಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ಕುಟುಂಬ ರಾಜಕಾರಣ ನಿಲ್ಲಿಸುವ ದಿಸೆಯಲ್ಲಿ ಪಕ್ಷದ ವರಿಷ್ಠರು ಗಂಭೀರವಾಗಿ ಆಲೋಚಿಸಬೇಕು’ ಎಂದರು.
‘ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣವನ್ನು ಹಲವು ವರ್ಷಗಳಿಂದ ನೋಡುತ್ತಿದ್ದೇನೆ. ಇಂಥ ರಾಜಕಾರಣದಿಂದ ದೇಶಕ್ಕೆ ಹಿನ್ನಡೆ ಆಗುವುದೇ ಹೊರತು ಅಭಿವೃದ್ಧಿ ಆಗುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.