ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ತ್ರಿವೇಣಿ ಸಂಗಮದಲ್ಲಿ ಯತ್ನಾಳ ಭಾವ ಚಿತ್ರವನ್ನು ಐದು ಬಾರಿ ಮುಳುಗಿಸಿ, ಹರಹರ ಮಹಾದೇವ ಎಂದು ಘೋಷಣೆ ಮೊಳಗಿಸಿದರು.
ಬಿಜೆಪಿ ವಿಜಯಪುರ ನಗರ ಮಂಡಲ ಉಪಾಧ್ಯಕ್ಷ ನಂದು ಗಡಗಿ ನೇತೃತ್ವದಲ್ಲಿ ಬಿಜೆಪಿ ವಿಜಯಪುರ ನಗರದ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ ಕೂಡಗಿ, ವಿಜಯ ಬೋಸಲೆ, ವಿವೇಕ ಬೈರಗೊಂಡ, ಸಂತೋಷ ಅವರು ನದಿಯಲ್ಲಿ ಶಾಸಕ ಯತ್ನಾಳ ಅವರ ಭಾವಚಿತ್ರದೊಂದಿಗೆ ಪ್ರಾರ್ಥನೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.