ADVERTISEMENT

ವಿಜಯಪುರ: ರೈತ ಸಂಘ, ಹಸಿರು ಸೇನೆ ಪ್ರತಿಭಟನೆ 23ಕ್ಕೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 15:40 IST
Last Updated 19 ಜುಲೈ 2024, 15:40 IST

ವಿಜಯಪುರ: ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಫಸಲ್‌ ಭೀಮಾ ಯೋಜನೆಯಡಿ ಅನೇಕ ಅವ್ಯವಹಾರ ನಡೆದಿದ್ದು, ರೈತರಿಗೆ ವಂಚನೆ ಮಾಡಲಾಗಿದೆ. ಕೂಡಲೇ ರೈತರಿಗೆ ವಿಮಾ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜುಲೈ 23 ರಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಬೀಗ ಹಾಕುವ ಮೂಲಕ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ವರ್ಷ ಭೀಕರ ಬರ ಆವರಿಸಿದ ಹಿನ್ನೆಲೆ ಜಿಲ್ಲೆಯ 13 ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಬರ ಪೀಡಿತವೆಂದು ಘೋಷಿಸಿದೆ. ಆದರೆ, ಬೆಳೆ ಪರಿಹಾರ ವಿತರಣೆಯಲ್ಲಿ ರೈತರನ್ನು ವಂಚಿಸುವ ಕೆಲಸ ನಡೆದಿದೆ’ ಎಂದು ಆರೋಪಿಸಿದರು.

ಜಿಲ್ಲಾ ಘಟಕದ ಗೌರವಾಧ್ಯಕ್ಷ ಕಲ್ಲಪ್ಪ ಪಾರಶೆಟ್ಟಿ, ಸಂಚಾಲಕ ರಾಮನಗೌಡ ಪಾಟೀಲ, ಮಹಾದೇವಪ್ಪ ತೇಲಿ, ಸಂಗಪ್ಪ ಟಕ್ಕೆ, ಪ್ರತಾಪ ನಾಗರಗೊಜ್ಜಿ, ಮಹಾಂತೇಶ ಮಮದಾಪುರ, ವಿರೇಶ ಗಬ್ಬೂರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.