ADVERTISEMENT

ಪ್ರವಾಹ: ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ 

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 15:55 IST
Last Updated 23 ಜೂನ್ 2021, 15:55 IST
ತಾವರಖೇಡ ಗ್ರಾಮದಲ್ಲಿ ದೋಣಿ ಸಹಾಯದಿಂದ ಜನರ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಣಕು ಪ್ರದರ್ಶನ ನಡೆಯಿತು
ತಾವರಖೇಡ ಗ್ರಾಮದಲ್ಲಿ ದೋಣಿ ಸಹಾಯದಿಂದ ಜನರ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಣಕು ಪ್ರದರ್ಶನ ನಡೆಯಿತು   

ವಿಜಯಪುರ: ಪ್ರವಾಹ ಪರಿಸ್ಥಿತಿ ಎದುರಿಸುವ ಕುರಿತಂತೆ ತಾವರಖೇಡ ಗ್ರಾಮದಲ್ಲಿ ದೋಣಿ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸುವ ಕುರಿತು ಅಣಕು ಪ್ರದರ್ಶನ ನಡೆಸಲಾಯಿತು.

ಇಂಡಿ ಉಪವಿಭಾಗಾಧಿಕಾರಿ ಡಾ.ರಾಹುಲ್ ಸಿಂಧೆ ಇವರ ನೇತೃತ್ವದಲ್ಲಿ ಸಿಂದಗಿ ತಹಶೀಲ್ದಾರ್‌, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ, ಹೋಂ ಗಾರ್ಡ್ಸ್ ಗಳು ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಅಣಕು ಕಾರ್ಯಾಚರಣೆ ನಡೆಯಿತು.

ದೇವಣಗಾವ್ ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಯೋಜನಾ ಸಮಿತಿಗೆ ಮುಂಬರುವ ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ವ ರೀತಿಯಲ್ಲಿ ಸನ್ನದ್ಧಗೊಳ್ಳಲು ತಿಳಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.