ADVERTISEMENT

ಜಾನಪದ ಶ್ರೇಷ್ಠ ಸಂಸ್ಕೃತಿ: ಸಚಿವ ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 15:26 IST
Last Updated 30 ಜುಲೈ 2023, 15:26 IST
ಬಸವನಬಾಗೇವಾಡಿಯ ಪ್ರವಾಸಿ ಮಂದಿರದಲ್ಲಿ ಕನ್ನಡ ಜಾನಪದ ಪರಿಷತ್, ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ ವತಿಯಿಂದ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಲಾಯಿತು
ಬಸವನಬಾಗೇವಾಡಿಯ ಪ್ರವಾಸಿ ಮಂದಿರದಲ್ಲಿ ಕನ್ನಡ ಜಾನಪದ ಪರಿಷತ್, ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ ವತಿಯಿಂದ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಲಾಯಿತು   

ಬಸವನಬಾಗೇವಾಡಿ: ಭಾರತದ ಮೂಲ ಸಂಸ್ಕೃತಿಯಾಗಿರುವ ಜಾನಪದ ನಮ್ಮ ದೇಶದ ಶ್ರೇಷ್ಠ ಸಂಸ್ಕೃತಿಯಾಗಿದೆ. ಇಂತಹ ಜಾನಪದ ಇಂದು ಕಳೆಗುಂದುತ್ತಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ, ಸಕ್ಕರೆ, ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ, ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕು ಘಟಕ ಹಾಗೂ ಪಡಗಾನೂರಿನ ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ ವತಿಯಿಂದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಾನಪದ ಪರಂಪರೆಯನ್ನು ಕಾಪಾಡಬೇಕಾದದ್ದು ನಮ್ಮೇಲ್ಲರ ಕರ್ತವ್ಯವಾಗಿದೆ ಎಂದರು.

ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ಬಸವನಬಾಗೇವಾಡಿ ತಾಲ್ಲೂಕಾಧ್ಯಕ್ಷ ದೇವೇಂದ್ರ ಗೋನಾಳ, ನಿಡಗುಂದಿ ತಾಲ್ಲೂಕಾಧ್ಯಕ್ಷ ವೈ.ಎಸ್.ಗಂಗಶೆಟ್ಟಿ , ಕೊಲ್ಹಾರ ತಾಲ್ಲೂಕಾಧ್ಯಕ್ಷ ಮಲ್ಲಪ್ಪ ಗಣಿ, ಜಿಲ್ಲಾ ಸಂಚಾಲಕ ಪ್ರೊ. ಜಿ.ಎಂ. ಹಳ್ಳೂರ, ಪದಾಧಿಕಾರಿಗಳಾದ ಬಸಪ್ಪಣ್ಣ ಹಾರಿವಾಳ, ಭೀಮಶಿ ಬೀಳಗಿ, ಕಾಶೀನಾಥ ಅವಟಿ, ಬಸಪ್ಪ ಕುಂಬಾರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.