ಮುದ್ದೇಬಿಹಾಳ: ‘ಜನಪದ ಸಾಹಿತ್ಯ, ಸಂಸ್ಕೃತಿ ಭಾರತೀಯರ ಜೀವನದ ಒಂದು ಅವಿಭಾಜ್ಯ ಅಂಗ. ದೇಶವು ವಿಶಿಷ್ಟ ಜನಪದ ಸಂಸ್ಕೃತಿಯನ್ನು ಹೊಂದಿದೆ’ ಎಂದು ಎಂ.ಜಿ.ವಿ.ಸಿ ಮಹಾವಿದ್ಯಾಲಯದ ಉಪನ್ಯಾಸಕ ಪ್ರಕಾಶ ನರಗುಂದ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಹಡಲಗೇರಿಯ ಮಾದರಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕನ್ನಡ ಜನಪದ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಕಾಲೇಜಿನಿಂದ ಕಾಲೇಜಿಗೆ’ ಜನಪದ ಸಂಸ್ಕೃತಿಕ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಮಾತನಾಡಿ, ‘ಜನಪದೀಯ ಸಂಸ್ಕೃತಿ ನಮ್ಮ ಭಾಷೆಯನ್ನೂ ಸಿರಿವಂತಗೊಳಿಸಿದೆ’ ಎಂದರು.
ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕೃಷ್ಣಮೂರ್ತಿ, ನಿರ್ಗಮಿತ ಯೋಜನಾಧಿಕಾರಿ ನಾಗೇಶ ಎನ್.ಪಿ., ಕಜಾಪ ತಾಲ್ಲೂಕು ಘಟಕದ ಅಧ್ಯಕ್ಷ ಎ.ಆರ್. ಮುಲ್ಲಾ, ಜಿಲ್ಲಾ ಅಧ್ಯಕ್ಷ ಪುಂಡಲೀಕ ಮುರಾಳ, ಐಕ್ಯುಎಸಿ ಸಂಯೋಜಕ ಅನಿಲಕುಮಾರ ಡಿಗ್ಗೆ, ಸಾಂಸ್ಕೃತಿಕ ಕಾರ್ಯದರ್ಶಿ ರೇವಣಸಿದ್ದಪ್ಪ ಆಮಣ್ಣಿ, ಉಪನ್ಯಾಸಕ ಗಂಗಾಧರ ನಿಂಬಾಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.