ADVERTISEMENT

ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 18 ಮೇ 2021, 12:35 IST
Last Updated 18 ಮೇ 2021, 12:35 IST

ವಿಜಯಪುರ: ಜಿಲ್ಲೆಯ ಎಲ್ಲ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 132 ದಿನಗಳ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಉಪ್ಪು ಮತ್ತು 55 ದಿನಗಳಿಗೆ ಪ್ರತಿ ಮಗುವಿಗೆ 1 ಪ್ಯಾಕೇಟ್ ಎಣ್ಣೆ ( ಸೂರ್ಯಕಾಂತಿ ಎಣ್ಣೆ ) ವಿತರಿಸಲಾಗುವುದು ಎಂದು ಜಿಲ್ಲಾ ಅಕ್ಷರ ದಾಸೋಹ ಯೋಜನೆ ಶಿಕ್ಷಣಾಧಿಕಾರಿ ಎಸ್.ಎಸ್.ಮುಜಾವರ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಮುಖ್ಯ ಶಿಕ್ಷಕರು ನಿಯಮಾನುಸಾರವಾಗಿ ಪಾಲಕ, ಪೋಷಕರು, ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಿದ್ದಾರೆ.

ಆಹಾರಧಾನ್ಯ ವಿತರಣಾ ಕಾರ್ಯವು ಕೋವಿಡ್ -19ರ ಮಾರ್ಗಸೂಚಿಯಂತೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.