ನಾಲತವಾಡ: ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯ ಗಡಿ ಭಾಗದ ಬಸವಸಾಗರ ಜಲಾಶಯ ಸಮೀಪದಲ್ಲಿರುವ, ವಿಜಯಪುರ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಸಸ್ಯಪಾಲನಾ ಅರಣ್ಯ ಇಲಾಖೆಯ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ತೀವ್ರ ಸ್ವರೂಪದ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.
ಮುದ್ದೇಬಿಹಾಳ ಪೋಲಿಸ್ ಠಾಣೆಯ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹಾಗೂ ನಾಲತವಾಡ ಹೊರ ಠಾಣೆಯ ಸಿಬ್ಬಂದಿ ಬಸವರಾಜ ಹಿಪ್ಪರಗಿ, ರವಿ ವಿಜಯಪುರ, ಹನುಮಂತ ಹೆಬ್ಬುಲಿ, ಬಸವರಾಜ ಚಿಂಚೋಳಿ, ಅಗ್ನಿ ಶಾಮಕ ಪಿಎಸ್ಐ ಪ್ರಮೋದ ಸುಂಕದ, ಹಾಗು ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.