ADVERTISEMENT

ವಿಜಯಪುರ | ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ ನಿಧನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2023, 16:42 IST
Last Updated 3 ಸೆಪ್ಟೆಂಬರ್ 2023, 16:42 IST
<div class="paragraphs"><p>ವಿಲಾಸಬಾಬು ಆಲಮೇಲಕರ್</p></div>

ವಿಲಾಸಬಾಬು ಆಲಮೇಲಕರ್

   

ವಿಜಯಪುರ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ (64) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ವಿಜಯಪುರದ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.

ADVERTISEMENT

ವಿಜಯಪುರ ಜಿಲ್ಲೆಯಲ್ಲಿ ಈ ಹಿಂದೆ ಅಸ್ತಿತ್ವದಲ್ಲಿದ್ದ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರಕ್ಕೆ (ಈಗಿನ ನಾಗಠಾಣ ಮೀಸಲು ಕ್ಷೇತ್ರ) 1998ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ವಿಜಯಪುರ ನಗರದ ಶ್ರೀಸಿದ್ಧೇಶ್ವರ ಸಹಕಾರಿ ಬ್ಯಾಂಕ್‌ ಉಪಾಧ್ಯಕ್ಷ, ನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಸರ್ಕಾರಿ ಗೌರವಗಳೊಂದಿಗೆ ನಡೆದ ಅಂತ್ಯಕ್ರಿಯೆಯಲ್ಲಿ ಸಚಿವ ಶಿವಾನಂದ ಪಾಟೀಲ, ಶಾಸಕ ಅಶೋಕ ಮನಗೂಳಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.