ADVERTISEMENT

ವಿಜಯಪುರ: ಮಾರ್ಚ್ 30 ವರೆಗೆ ಉಚಿತ ಕಿಡ್ನಿ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 15:21 IST
Last Updated 26 ಮಾರ್ಚ್ 2024, 15:21 IST

ವಿಜಯಪುರ: ನಗರದ ಅಥಣಿ ರಸ್ತೆಯಲ್ಲಿರುವ ಅಲ್‌ಅಮೀನ್‌ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮೂತ್ರಪಿಂಡ ದಿನಾಚರಣೆ ಅಂಗವಾಗಿ ಮಾರ್ಚ್ 25ರಿಂದ 30ರ ವರೆಗೆ ಕಿಡ್ನಿ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. 

ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ಆರೋಗ್ಯ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಜರುಗಲಿದೆ. ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುವವರು ಶಿಬಿರದಲ್ಲಿ ತಪಾಸಣೆ ಮಾಡಿಸಿ ಕೊಳ್ಳಬಹುದಾಗಿದೆ.

ನುರಿತ ವೈದ್ಯರಾದ ಡಾ.ಸುರೇಶ್ ಕಾಗಲ್ಕರ್, ಡಾ. ಅಶೋಕ ಬಿರಾದಾರ, ಡಾ. ಅವಿನಾಶ್ ಗೌಡರ ಹಾಗೂ ಡಾ. ರಾಕೇಶ ಪಾಟೀಲ ಭಾಗವಹಿಸಲಿದ್ದಾರೆ ಎಂದು ಆಸ್ಪತ್ರೆಯ ಅಧೀಕ್ಷಕರಾದ ಡಾ.ಜಿಲಾನಿ ಅವಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.