
ನಾಲತವಾಡ: ಪಟ್ಟಣದ ಸಾರ್ವಜನಿಕರು ತಮ್ಮ ಮನೆಯಲ್ಲೇ ಕುಳಿತು ಇ- ಖಾತಾ ಪಡೆದುಕೊಳ್ಳಬಹುದಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರ ತಿಳಿಸಿದ್ದಾರೆ.
ಸರ್ಕಾರವು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಇ– ಖಾತಾವನ್ನು ಪಡೆದುಕೊಳ್ಳಲು https://eaashti.karnataka.gov.in ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದು ಹಾಗೂ ಆಸ್ತಿಗೆ ಸಂಬಂಧಿಸಿದ ಮಾಹಿತಿಯನ್ನು ಇ– ಆಸ್ತಿ ತಂತ್ರಾಂಶದಲ್ಲಿ ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ಪಟ್ಟಣ ಪಂಚಾಯಿತಿಯು ಪರಿಶೀಲಿಸಿ ಅನುಮೋದಿಸಲಾಗುವುದು ಎಂದು ತಿಳಿಸಿದರು.
ಇ– ಆಸ್ತಿ ತಂತ್ರಾಂಶದಲ್ಲಿ ಇ– ಖಾತಾ ಪಡೆಯಲು ಬೇಕಾದ ದಾಖಲೆಗಳಾದ ನೋಂದಾಯಿತ ಕ್ರಯಾ ಪತ್ರ, ಆಸ್ತಿ ತರಿಗೆ ಚಲನ್, ಋಣಭಾರ ಪ್ರಮಾಣ ಪತ್ರ, (ಇ ಸಿ) ನಮೂನೆ-15/16, ವಿದ್ಯುತ್ ಆರ್ ಆರ್ ನಂಬರ್, ನೀರಿನ ಕರ ಭರಣಾ ಮಾಡಿದ ರಶೀದಿ, ಸ್ವತ್ತಿನ ಛಾಯಾಚಿತ್ರ, ಮಾಲೀಕರ ಭಾವಚಿತ್ರ, ಮಾಲೀಕರ ಗುರುತಿನ ಚೀಟಿ ಸ್ವತ್ತಿಗೆ ಸಂಬಂಧಿಸಿದ ಇತರೇ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 99642 21000, 74118 73042, 93802 78494, 99019 69878 ಅಲ್ಲದೆ ಕರ್ನಾಟಕ ಓನ್ ಕೇಂದ್ರಗಳಲ್ಲಿ ಸಹ ಇ-ಆಸ್ತಿ ತಂತ್ರಾಂಶವನ್ನು ಬಳಸಿ ಸಲ್ಲಿಸಬಹುದಾಗಿದೆ ಎಂದು ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.