ADVERTISEMENT

ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್‌, ಕಪ್ಪು ಬಟ್ಟೆ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 11:57 IST
Last Updated 15 ಆಗಸ್ಟ್ 2021, 11:57 IST
ವಿಜಯಪುರ ಜಿಲ್ಲಾಡಳಿತ ಭಾನುವಾರ ಏರ್ಪಡಿಸಿದ್ದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವೇದಿಕೆಗೆ ಆಗಮಿಸಿದ ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತೆಯರನ್ನು ಪೊಲೀಸರು ತಡೆದು, ವಶಕ್ಕೆ ಪಡೆದರು–ಪ್ರಜಾವಾಣಿ ಚಿತ್ರ
ವಿಜಯಪುರ ಜಿಲ್ಲಾಡಳಿತ ಭಾನುವಾರ ಏರ್ಪಡಿಸಿದ್ದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವೇದಿಕೆಗೆ ಆಗಮಿಸಿದ ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತೆಯರನ್ನು ಪೊಲೀಸರು ತಡೆದು, ವಶಕ್ಕೆ ಪಡೆದರು–ಪ್ರಜಾವಾಣಿ ಚಿತ್ರ   

ವಿಜಯಪುರ:ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ವೇದಿಕೆಗೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಘೇರಾವ್ ಹಾಕಿದರು.

‘ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವೆ ಧ್ವಜಾರೋಹಣ ನೆರವೇರಿಸುವುದು ಮಾಡುವುದು ಬೇಡ’, ‘ಸಚಿವೆ ಜೊಲ್ಲೆಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ, ಕಪ್ಪು ಬಟ್ಟೆ ಪ್ರದರ್ಶಿಸಿದರು.

ತಕ್ಷಣಪೊಲೀಸರು ಪ್ರತಿಭಟನಾಕಾರರನ್ನು ತಡೆದು, ವಶಕ್ಕೆ ಪಡೆದರು. ಕೆಲ ಸಮಯದ ಬಳಿಕ ಅವರನ್ನು ಬಿಡುಗಡೆಗೊಳಿಸಿದರು.

ADVERTISEMENT

ಯಾವುದೇ ತಪ್ಪು ಮಾಡಿಲ್ಲ:‘ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಏಳಿಗೆಯನ್ನು ಸಹಿಸದ ಶತೃಗಳು ಮತ್ತು ಹಿತ ಶತೃಗಳು ದುರುದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ನಾನು ಈ ಷಡ್ಯಂತ್ರಕ್ಕೆ ಬಲಿಯಾಗಿಲ್ಲ. ಯಾವುದೇ ತನಿಖೆಗೂ ಸಿದ್ಧ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಅಕ್ಕಮಹಾದೇವಿ ಅವರ ‘ಬೆಟ್ಟದ ಮೇಲೊಂದು ಮನೆಯ ಮಾಡಿ’ ವಚನವನ್ನು ವಾಚಿಸಿ, ‘ಸಾರ್ವಜನಿಕ ಜೀವನದಲ್ಲಿ ಸ್ತುತಿ, ನಿಂದನೆ ಸಹಜ. ಶಾಂತವಾಗಿ, ಧೈರ್ಯದಿಂದ ಎದುರಿಸುತ್ತೇನೆ’ಎಂದರು.

ರಾಜಕೀಯದಲ್ಲಿ ಮಹಿಳೆಯರನ್ನು ನೋಡುವ ದೃಷ್ಟಿಯೇ ಬೇರೆಯಾಗಿರುವ ಈ ಸಂದರ್ಭದಲ್ಲಿ ಸ್ವಸಾಮಾರ್ಥ್ಯದಿಂದ ಕಷ್ಟಪಟ್ಟು ಮೇಲೆ ಬಂದಿದ್ದೇನೆ. ತಪ್ಪೇ ಮಾಡದಿರುವಾಗ ಅಂಜುವುದಿಲ್ಲ

– ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.