ADVERTISEMENT

ಕಾಂಗ್ರೆಸ್‌ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯ ಮತನೀಡಿ

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮನವಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 15:31 IST
Last Updated 5 ಡಿಸೆಂಬರ್ 2021, 15:31 IST
ಇಂಡಿ ಪಟ್ಟಣದಲ್ಲಿ ಭಾನುವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಸುನೀಲಗೌಡ ಪಾಟೀಲ ಮಾತನಾಡಿದರು
ಇಂಡಿ ಪಟ್ಟಣದಲ್ಲಿ ಭಾನುವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಸುನೀಲಗೌಡ ಪಾಟೀಲ ಮಾತನಾಡಿದರು   

ಇಂಡಿ: ಶಾಸಕ ಎಂ.ಬಿ.ಪಾಟೀಲರ ಜೊತೆಗೆ ಕೆಲವು ವಿಚಾರಗಳಲ್ಲಿ ನನ್ನ ಭಿನ್ನಾಭಿಪ್ರಾಯವಿರಬಹುದು. ಆದರೆ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲರ ಜೊತೆಗೆ ಒಳ್ಳೆಯ ಗೆಳೆತನಿವಿದೆ. ಅವರು ಮತ್ತು ನಾನು ಸೇರಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾರ್ಯದಲ್ಲಿ ತೊಡಗುತ್ತೇವೆ. ಕಾರಣ ಅವರಿಗೆ ಮೊದಲನೇ ಪ್ರಾಶಸ್ತ್ಯದ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಶಾಸಕ ಯಶವಂತರಾಯಗೌಡ ಪಾಟೀಲ ಮಾಡಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳಲ್ಲಿ ಹೃದಯವಂತಿಕೆ ಇದ್ದರೆ ಮಾತ್ರ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ ಎಂದರು.

ಕಾಂಗ್ರೆಸ್ ಪಕ್ಷ ನೆಹರೂ ಅವರಿಂದ ಇಲ್ಲಿಯವರೆಗೆ ಗ್ರಾಮಗಳ ಅಭಿವೃದ್ಧಿಯ ಕೆಲಸ ಮಾಡಿದೆ. ಇಂದಿರಾ ಗಾಂಧಿ ಅವರ ಕಾಲದಲ್ಲಿ ಬ್ಯಾಂಕ್‌ ರಾಷ್ಟ್ರೀಕರಣ, ಗರೀಬಿ ಹಠಾವೋ, ಪಂಚಾಯಿತಿ ವ್ಯವಸ್ಥೆ ಜಾರಿಗೆ, ಪಂಚವಾರ್ಷಿಕ ಯೋಜನೆಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಸೇರಿದಂತೆ ಅನೇಕ ಕಾರ್ಯಕ್ರಮಗಳ ಅನುಷ್ಠಾನಗಳ ಮೂಲಕ ದೇಶದ ಅಭಿವೃದ್ಧಿ ಮಾಡಲಾಗಿದೆ ಎಂದರು.

ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ಗೌಡ ಪಾಟೀಲ ಮಾತನಾಡಿ,ನನ್ನ ಮೂರು ವರ್ಷಗಳ ಅಧಿಕಾರ ಅವಧಿಯಲ್ಲಿ ಎರಡು ವರ್ಷ ಕೊರೊನಾ ಕಾಡಿದೆ. ಆ ಸಂದರ್ಭದಲ್ಲಿ ನೊಂದವರಿಗಾಗಿ ತನು, ಮನ, ಧನದಿಂದ ಶ್ರಮಿಸಿದ್ದೇನೆ. ಇನ್ನುಳಿದ ಒಂದು ವರ್ಷದ ಅವಧಿಯಲ್ಲಿ ಗ್ರಾ. ಪಂ. ಸದಸ್ಯರ ಗೌರವಧನ ಹೆಚ್ಚಿಸಲು ಶ್ರಮಿಸಿದ್ದೇನೆ ಎಂದು ಹೇಳಿದರು.

ಇಂಡಿ ಶಾಸಕರ ಮತ್ತು ಜಿಲ್ಲೆಯ ಪಕ್ಷದ ಹಿರಿಯರ ಸಹಕಾರದೊಂದಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಹಿಳೆಯರಿಗಾಗಿ ಶೌಚಾಲಯನಿರ್ಮಾಣಕ್ಕೆ ಮೊದಲನೇ ಆದ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.

ಗ್ರಾಂ. ಪಂ. ಸದಸ್ಯರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಪಾಸ್, ನೆನೆಗುದಿಗೆ ಬಿದ್ದಿರುವ ಮನೆಗಳ ಕಟ್ಟಡಗಳಿಗೆ ಅನುದಾನ ಒದಗಿಸಿವುದು, ಹೆಚ್ಚಿನ ಮನೆಗಳ ಮಂಜೂರಾತಿಗಾಗಿ ಪ್ರಯತ್ನ, ರಸ್ತೆ ಸುಧಾರಣೆ, ಶುದ್ಧ ಕುಡಿಯುವ ನೀರು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ, ಸಂಗಮೇಶ ಬಬಲೇಶ್ವರ, ಸಂಬಾಜಿರಾವ್ ಮಿಸಾಳೆ, ಬಿ.ಎಂ.ಕೋರೆ, ಶ್ರೀಶೈಲ ಪೂಜಾರಿ, ಸದಾಶಿವ ಪ್ಯಾಟಿ, ರುಕ್ಮುದ್ದೀನ ತದ್ದೇವಾಡಿ, ಮುತ್ತಪ್ಪ ಪೋತೆ, ಹಣಮಂತ ಖಂಡೇಕಾರ, ಅಣ್ಣಪ್ಪ ಬಿದರಕೋಟಿ, ಭೀಮಣ್ಣ ಕವಲಗಿ, ಇಲಿಯಾಸ್ ಬೋರಾಮಣಿ, ಕಲ್ಲನಗೌಡ ಬಿರಾದಾರ, ಶೇಖರ ನಾಯಕ, ವೈಜನಾಥ ಕರ್ಪೂರಮಠ, ಜೆಟ್ಟೆಪ್ಪ ರವಳಿ, ಸಿದ್ದನಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.