ADVERTISEMENT

ಜಂತುಹುಳು ಮಾತ್ರೆ ಮಕ್ಕಳಿಗೆ ನೀಡಿ: ಡಿಸಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 14:32 IST
Last Updated 24 ನವೆಂಬರ್ 2021, 14:32 IST
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣ ದಿನದ ಅಂಗವಾಗಿ ಹೊರತರಲಾಗಿರುವ ವಾಲ್ ಪೋಸ್ಟರ್ ಹಾಗೂ ಬ್ಯಾನರ್ ಅನ್ನು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು 

ವಿಜಯಪುರ: ಜಿಲ್ಲೆಯಲ್ಲಿರುವ ಒಂದರಿಂದ 19 ವರ್ಷದ ಎಲ್ಲ ಮಕ್ಕಳಿಗೆ ತಪ್ಪದೇ ನಿರ್ದಿಷ್ಟ ಪ್ರಮಾಣದ ಜಂತುಹುಳು ನಿವಾರಣೆ ಮಾತ್ರೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.

‌ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜಂತುಹುಳು ನಿವಾರಣಿ ಮಾತ್ರೆಯು ಮಕ್ಕಳು ಹಾಗೂ ವಯಸ್ಕರಿಗೆ ಸುರಕ್ಷಿತ ಔಷಧಿಯಾಗಿದೆ ಎಂದರು.

ADVERTISEMENT

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಕುಮಾರ್ ಯರಗಲ್, ಆರ್. ಸಿ. ಎಚ್. ಅಧಿಕಾರಿ ಡಾ.ಮಹೇಶ ನಾಗರಬೆಟ್ಟ, ಡಾ. ಐ .ಎನ್‌.ಧಾರವಾಡಕರ್, ಡಾ.ತಾಳಿಕೋಟಿ, ಡಾ. ಇಂಗಳೇ, ಸುರೇಶ್ ಹೊಸಮನಿ, ಜಿ.ಎಂ.ಕೋಲೂರ್, ಆರ್.ಎನ್. ಹಂಚಿನಾಳ, ಸಾವಿತ್ರಿ ಹಿಪ್ಪರಗಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.