ADVERTISEMENT

ವಿಜಯಪುರ | ಸ್ವಚ್ಛತೆಗೆ ಆದ್ಯತೆ ನೀಡಿ: ಸಿಇಒ

‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 15:39 IST
Last Updated 17 ಸೆಪ್ಟೆಂಬರ್ 2024, 15:39 IST
ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿದರು
ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿದರು   

ವಿಜಯಪುರ: ‘ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ’ ಎಂಬ ಘೋಷವಾಕ್ಯದೊಂದಿಗೆ ಸೆ. 17 ರಿಂದ ಅ. 2 ರವರೆಗೆ ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದರು. 

ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಜಿಲ್ಲಾ ಹಾಗೂ ತಾಲ್ಲೂಕು, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರತಿ ದಿನವೂ ಸ್ವಚ್ಛತೆ ಎಂಬುದು ನಮ್ಮೆಲ್ಲರ ಆದ್ಯತೆಯಾಗಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿಯೂ ಕಚೇರಿಯ ಆವರಣದಲ್ಲಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು. ಸುತ್ತಲಿನ ಪರಿಸರದ ಸ್ವಚ್ಛತೆಗೆ ಕಾಳಜಿ ವಹಿಸಬೇಕು. ಪರಿಸರ ಸ್ವಚ್ಛವಾಗಿದ್ದರೆ, ಆರೋಗ್ಯವಂತರಾಗಿ ಇರಲು ಸಾಧ್ಯ. ಆದ್ದರಿಂದ ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛತೆ ನಿರ್ವಹಣೆ ಮಾಡಬೇಕು. ಒಂದೇ ಕಡೆ ನೀರು ನಿಲ್ಲದಂತೆ ಗಮನ ಹರಿಸಬೇಕು. ಕರ್ತವ್ಯದ ಸ್ಥಳದಲ್ಲಿಯೂ ಸ್ವಚ್ಛತೆ ಕಾಪಾಡಬೇಕು’ ಎಂದು ಹೇಳಿದರು.

ADVERTISEMENT

ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸ್ವಚ್ಛ ಭಾರತ ಮಿಷನ್ ಯೋಜನೆಯ ಅಡಿ ಜಿಲ್ಲಾ ಪಂಚಾಯಿತಿಯ ಎಲ್ಲ ಕೊಠಡಿ, ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ಭೇಟಿ ಸ್ಥಳ, ಉದ್ಯಾನ ಸ್ಥಳ, ಒಳಾಂಗಣ ಮತ್ತು ಹೊರ ಆವರಣಗಳಲ್ಲಿ ಸ್ವಚ್ಛತೆ ಮಾಡಲಾಯಿತು.

ಹೊನಗನಹಳ್ಳಿಗೆ ಭೇಟಿ: ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ಆಯೋಜಿಸಲಾಗಿತ್ತು. ಬಳಿಕ ಸಿಇಒ ಅವರು ಸ್ವತಃ ಪ್ರೌಢಶಾಲೆ ಆವರಣದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ ಅಭಿಯಾನಕ್ಕೆ ಚಾಲನೆ ನೀಡಿದರು.

ಹೊನಗನಹಳ್ಳಿ ಗ್ರಾಮದ ಗ್ರಂಥಾಲಯದ ಅರಿವು ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ವಾಚಕರಿಗೆ ಅನುಕೂಲವಾಗುವ ಪುಸ್ತಕಗಳ ಪಟ್ಟಿಮಾಡಿ, ಕಂಪ್ಯೂಟರ್ ಹಾಗೂ ಇತರ ಪರಿಕರಗಳನ್ನು ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಖರೀದಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿ. ಎಸ್. ಹಿರೇಮಠ ಅವರಿಗೆ ಸೂಚಿಸಿದರು.

ಕೂಸಿನ ಮನೆಗೆ ಭೇಟಿ ನೀಡಿ, ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟದಿಂದ ಇರಬೇಕು. ಸರಿಯಾದ ಸಮಯಕ್ಕೆ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂದು ಆರೈಕೆದಾರರಿಗೆ ಸೂಚಿಸಿದರು.

ಹೊನಗನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಸ್ಪಂದಿಸಬೇಕು. ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳನ್ನು ವ್ಯವಸ್ಥೆ, ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಬಬಲೇಶ್ವರ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ವಿ. ಎಸ್. ಹಿರೇಮಠ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಚಿಕೇತನ ಬಿದರಿ, ಉಪಾಧ್ಯಕ್ಷ ರಮೇಶ ಕಾಂಬಳೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಶ್ರೀ ಪವಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.